ಪ್ರತ್ಯೇಕ ರಾಜ್ಯಕ್ಕಾಗಿ ಧ್ವಜಾರೋಹಣಕ್ಕೆ ಮುಂದಾಗಿದ್ದ 20ಕ್ಕೂ ಅಧಿಕ ಜನರ ಬಂಧನ
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ಸರ್ಕಾರ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಆರೋಪಿಸಿ ನಗರದಲ್ಲಿ ಪ್ರತ್ಯೇಕ ಧ್ವಜಾರೋಹಣಕ್ಕೆ ಮುಂದಾಗಿದ್ದ 20ಕ್ಕೂ ಅಧಿಕ ಜನ ಹೋರಾಟಗಾರರನ್ನು ಪೊಲೀಸರು ಬೆಳಿಗ್ಗೆ ಬಂಧಿಸಿದರು.
ರಾಜ್ಯೋತ್ಸವದ ಪ್ರಯುಕ್ತ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ನಗರದ ಕೋರ್ಟ್ ರಸ್ತೆಯಲ್ಲಿರುವ ವಿಶ್ವೇಶ್ವರಯ್ಯ ಭವನದಿಂದ ಪ್ರತ್ಯೇಕ ರಾಜ್ಯಕ್ಕಾಗಿ ಒತ್ತಾಯಿಸಿ ಮೆರವಣಿಗೆ ಮೂಲಕ ಪಟೇಲ್ ವೃತ್ತದ ಬಳಿ ಧ್ವಜಾರೋಹಣ ಮಾಡಲು ಹೊರಟಾಗ ಪೊಲೀಸರು ತಡೆದರು.
ಪ್ರತ್ಯೇಕ ರಾಜ್ಯ ಆಗಲೇಬೇಕು ಎಂದು ಘೋಷಣೆ ಕೂಗಿದ ಕಾರ್ಯಕರ್ತರು, ಪ್ರತ್ಯೇಕ ಧ್ವಜಾರೋಹಣ ನೆರವೇರಿಸಲು ಮುಂದಾದರು. ಈ ವೇಳೆ ಸ್ಟೇಶನ್ ಬಜಾರ್ ಠಾಣೆ ಪೊಲೀಸ್ ಇನ್ ಸ್ಪೆಕ್ಟರ್ ಸಿದ್ದರಾಮೇಶ ಗಡೇದ ಅವರು ಮುಖಂಡ ಎಂ.ಎಸ್. ಪಾಟೀಲ ನರಿಬೋಳ ಸೇರಿದಂತೆ 20ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದರು.