March 19, 2026

ರಥೋತ್ಸವದ ಮೆರವಣಿಗೆ ಸಂದರ್ಭದಲ್ಲಿ ವಿದ್ಯುತ್ ತಂತಿ ಸ್ಪರ್ಶ: ಇಬ್ಬರು ಮಕ್ಕಳು ಸೇರಿದಂತೆ 11 ಮಂದಿ ದಾರುಣ ಸಾವು

0
image_editor_output_image-412256765-1651039937509.jpg

ತಮಿಳುನಾಡು: ರಥೋತ್ಸವದ ಮೆರವಣಿಗೆ ಸಂದರ್ಭದಲ್ಲಿ ಹೈವೋಲ್ಟೇಜ್ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ 11 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬುಧವಾರ ನಸುಕಿನ ವೇಳೆ ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ.

ಕಾಳಿಮೇಡುವಿನ ಅಪ್ಪಾರ್ ಮಾದಂ ದೇವಸ್ಥಾನದ ರಥೋತ್ಸವದ ಮೆರವಣಿಗೆ ವೇಳೆ ರಥ ಹೈವೋಲ್ಟೇಜ್ ವಿದ್ಯುತ್ ತಂತಿಗೆ ತಗುಲಿದಾಗ ಈ ದುರಂತ ಸಂಭವಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಇಬ್ಬರು ಮಕ್ಕಳು ಸೇರಿದಂತೆ 11 ಮಂದಿ ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ತಿರುಚಿರಾಪಲ್ಲಿ ಸೆಂಟ್ರಲ್ ಝೋನ್ ನ ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ವಿ.ಬಾಲಕೃಷ್ಣನ್ ವಿವರ ನೀಡಿರುವುದಾಗಿ ವರದಿ ಹೇಳಿದೆ.

Leave a Reply

Your email address will not be published. Required fields are marked *

error: Content is protected !!