March 19, 2026

ಮಲಯಾಳಂನ ಮತ್ತೋರ್ವ ಖ್ಯಾತ ನಟನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

0
Screenshot_2022-04-27-11-52-33-53_680d03679600f7af0b4c700c6b270fe7.jpg

ತಿರುವನಂತಪುರಂ: ಮಲಯಾಳಂನ ಮತ್ತೋರ್ವ ಖ್ಯಾತ ನಟನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ನಟ ಮತ್ತು ನಿರ್ಮಾಪಕ ವಿಜಯ್ ಬಾಬು ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ಕೇರಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಏಪ್ರಿಲ್ 22 ರಂದು ಯುವತಿ ನೀಡಿರುವ ದೂರಿನ ಮೇರೆಗೆ ಎರ್ನಾಕುಲಂ ಸೌತ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ಭರವಸೆ ನೀಡಿ ಕೊಚ್ಚಿಯ ಎರ್ನಾಕುಲಂ ಫ್ಲ್ಯಾಟ್‍ನಲ್ಲಿ ವಿಜಯ್ ಬಾಬು ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿ ಆರೋಪಿಸಿದ್ದಾಳೆ.

ಯುವತಿ ಕೋಝಿಕೋಡ್ ನಿವಾಸಿಯಾಗಿದ್ದು, ವಿಜಯ್ ಬಾಬು ವಿರುದ್ಧ ಅತ್ಯಾಚಾರ ಹಾಗೂ ದೈಹಿಕ ಹಲ್ಲೆ ನಡೆಸಿರುವುದಾಗಿ ದೂರು ನೀಡಿದ್ದರೂ, ಇದುವರೆಗೂ ಪೊಲೀಸರು ವಿಜಯ್ ಬಾಬುವನ್ನು ಕರೆಸಿ ವಿಚಾರಣೆ ನಡೆಸಿಲ್ಲ.

ಬದಲಾಗಿ ಪ್ರಕರಣವನ್ನು ಮುಚ್ಚಿಹಾಕುವ ಯತ್ನ ಮಾಡಿದ್ದಾರೆ ಎಂದು ಆರೋಪಿಸಿದ್ದಾಳೆ. ಇದು ಗಂಭೀರ ಪ್ರಕರಣವಾಗಿದ್ದರೂ ಇದುವರೆಗೂ ನಟನನ್ನು ಕರೆಸಿ ಪೊಲೀಸರು ವಿಚಾರಣೆ ನಡೆಸದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

Leave a Reply

Your email address will not be published. Required fields are marked *

error: Content is protected !!