ವಿಟ್ಲ: ಆಟೋ ರಿಕ್ಷಾ ಮತ್ತು ಸ್ಕೂಟರ್ ನಡುವೆ ಅಪಘಾತ: ಧರ್ಮಗುರುಗಳಿಗೆ ಗಾಯ
ವಿಟ್ಲ: ಆಟೋ ರಿಕ್ಷಾ ಸ್ಕೂಟರ್‌ಗೆ ಡಿಕ್ಕಿಯಾಗಿ ಇಬ್ಬರು ಧರ್ಮಗುರುಗಳು (ಮೊಯ್ಲರ್) ಗಾಯಗೊಂಡ ಘಟನೆ ಕಂಬಳಬೆಟ್ಟು ಸೇತುವೆ ಬಳಿ ನಡೆದಿದೆ.

ಆಟೋ ಚಾಲಕನ ಅಜಾಗರೂಕತೆ, ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ತಿಳಿಸಿದ್ದಾರೆ. ವಿಟ್ಲದಿಂದ ಕಂಬಳಬೆಟ್ಟು ಕಡೆ ಹೋಗುತ್ತಿದ್ದ ಆಟೋ ರಿಕ್ಷಾ ಪುತ್ತೂರಿನಿಂದ ವಿಟ್ಲಕ್ಕೆ ಬರುತ್ತಿದ್ದ ಸ್ಕೂಟರ್ ಗೆ ಡಿಕ್ಕಿಯಾಗಿದೆ.
ಮಹಮ್ಮದ್ ಯಾಸಿನ್ (21) ಕಾಲಿಗೆ ಗಂಭೀರ ಗಾಯವಾಗಿದೆ.
ಅಬ್ದುಲ್ ರಹಿಮಾನ್ ಕೈಗೆ ಗಾಯವಾಗಿದೆ. ಗಾಯಾಳುಗಳನ್ನು ಅದೇ ರಿಕ್ಷಾದಲ್ಲಿ ಪುತ್ತೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಪ್ರತ್ಯಕ್ಷದರ್ಶಿಗಳು ಘಟನೆಯ ಕುರಿತು ವಿಟ್ಲ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.





