ಮಂಗಳೂರು: ರೌಡಿ ಶೀಟರ್ ರಾಹುಲ್ ಹೊಯಿಗೆ ಬಜಾರ್ ಬರ್ಬರ ಹತ್ಯೆ
ಮಂಗಳೂರು: ಎಮ್ಮೆಕೆರೆ ಮೈದಾನ ದಲ್ಲಿ ರೌಡಿಶೀಟರ್ ರಾಹುಲ್ ಹೊಯಿಗೆ ಬಜಾರ್ ಎಂಬಾತನನ್ನು ದುಷ್ಕರ್ಮಿಗಳು ಹತ್ಯೆಗೈದ ಘಟನೆ ಗುರುವಾರ ಸಂಜೆ ನಡೆದಿದೆ
ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಎಮ್ಮೆಕೆರೆ ತಂಡದ ಮಹೇಂದ್ರ ಮತ್ತಿತರ ನಾಲ್ಕು ಮಂದಿ ಯುವಕರು ಸೇರಿ ಕೊಂದು ಹಾಕಿದ್ದಾರೆ. ಹಳೆ ದ್ವೇಷದಲ್ಲಿ ಹಗೆ ತೀರಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಕಕ್ಕೆ ರಾಹುಲ್ ಹೊಯ್ಗೆಬಜಾರ್ ನಿವಾಸಿಯಾಗಿದ್ದು, ಅಲ್ಲಿನ ರೌಡಿ ತಂಡದಲ್ಲಿ ಗುರುತಿಸಿಕೊಂಡಿದ್ದ.
ಎರಡು ವರ್ಷಗಳ ಹಿಂದೆ ಇದೇ ರಾಹುಲ್, ಎಮ್ಮೆಕೆರೆಯ ಹುಲಿ ತಂಡದ ಸದಸ್ಯರೊಬ್ಬರ ಮನೆಯಲ್ಲಿ ಜಗಳ ಮಾಡಿ ಮಹೇಂದ್ರ ಮತ್ತಿತರರ ಮೇಲೆ ಹಲ್ಲೆ ನಡೆಸಿದ್ದ ಎನ್ನಲಾಗಿದೆ.
ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಹೆಚ್ಚಿನ ವಿವರಗಳನ್ನು ನೀರಿಕ್ಷಿಸಲಾಗುತ್ತಿದೆ.





