February 1, 2026

ಅಮಿತ್ ಶಾ ಕರ್ನಾಟಕಕ್ಕೆ ಬಂದಾಗ ಸಂಪುಟದ ಬಗ್ಗೆ ತೀರ್ಮಾನ: ಬಸವರಾಜ ಬೊಮ್ಮಾಯಿ

0
basavaraj-bommai-pti-1104366-1651054925.jpg

ಬೆಂಗಳೂರು: ಮೇ.3ರಂದು ಅಮಿತ್ ಶಾ ಕರ್ನಾಟಕಕ್ಕೆ ಬಂದಾಗ ಸಂಪುಟದ ಬಗ್ಗೆ ತೀರ್ಮಾನ ಮಾಡುತ್ತೇನೆ, ಇಂದಿನ ದೆಹಲಿ ಪ್ರವಾಸದಲ್ಲಿ ಯಾವುದೇ ಕೇಂದ್ರ ಸಚಿವರು ಹಾಗೂ ಪಕ್ಷದ ನಾಯಕರನ್ನು ಭೇಟಿ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಖಾಲಿ ಇರುವ ಸಚಿವ ಸ್ಥಾನ ತುಂಬುವ ಬಗ್ಗೆ ವರಿಷ್ಠರ ಗಮನಕ್ಕೆ ತರಲಾಗಿದ್ದು, ಅಮಿತ್ ಶಾ ರಾಜ್ಯಕ್ಕೆ ಬಂದಾಗ ಈ‌ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು.

ಇನ್ನು ಶುಕ್ರವಾರ ಸಂಜೆ ದೆಹಲಿಗೆ ಹೋಗುತ್ತಿದ್ದೇನೆ. ನಾಳೆ ಜಡ್ಜ್ ಗಳು, ಮುಖ್ಯಮಂತ್ರಿಗಳ ಸಮ್ಮೇಳನದಲ್ಲಿ ಭಾಗಿಯಾಗುತ್ತೇನೆ. ನಂತರ ಭಾನುವಾರ ಬೆಳಿಗ್ಗೆ ಬೆಂಗಳೂರಿಗೆ ಬರುತ್ತೇನೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!