ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಅನುದಾನ 3 ಸಾವಿರ ಕೋಟಿಗೆ ಹೆಚ್ಚಳ: ಸಿಎಂ ಬೊಮ್ಮಾಯಿ
ಬೆಂಗಳೂರು: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮೀಸಲಿಡುವ ಅನುದಾನವನ್ನು ಮುಂದಿನ ಬಜೆಟ್ ನಲ್ಲಿ ಮೂರು ಸಾವಿರ ಕೋಟಿಗೆ ಏರಿಸಲಿದ್ದೇವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು.
ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಉದ್ಧಾಟಿಸಿ ಮಾತನಾಡಿದ ಅವರು, ಮುಂಬೈ ಕರ್ನಾಟಕ ಹೆಸರನ್ನು ಕಿತ್ತೂರು ಕರ್ನಾಟಕವಾಗಿ ಘೋಷಿಸಿದ್ದೇವೆ. ಮುಂದಿನ ಬಜೆಟ್ ನಲ್ಲೂ ಕಿತ್ತೂರು ಕರ್ನಾಟಕ ಅಭಿವೃದ್ಧಿಗೆ ವಿಶೇಷ ಅನುದಾನ ಮೀಸಲಿಡಲಿದ್ದೇವೆ. ಈ ಬಗ್ಗೆ ಮುಂದಿನ ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಿದ್ದೇವೆ. ಕಲ್ಯಾಣ ಕರ್ನಾಟಕದ ಅಭಿವೃದ್ದಿ ನೀಡುವ ಅನುದಾನವನ್ನು 3 ಸಾವಿರ ಕೋಟಿಗೆ ಏರಿಸಲಿದ್ದೇವೆ ಎಂದರು.




