September 25, 2026

ಮರಕ್ಕೆ ನೇಣು ಹಾಕಿಕೊಂಡು ಹೆಡ್ ಕಾನ್‌ಸ್ಟೆಬಲ್ ಆತ್ಮಹತ್ಯೆ

0
Screenshot_2022-05-01-04-46-52-92_680d03679600f7af0b4c700c6b270fe7.jpg

ಬೆಂಗಳೂರು: ಹೆಸರಘಟ್ಟ ಬಳಿಯ ತೋಟದಲ್ಲಿ ಮರವೊಂದಕ್ಕೆ ನೇಣು ಹಾಕಿಕೊಂಡು ಹೆಡ್ ಕಾನ್‌ಸ್ಟೆಬಲ್ ಮಂಜುನಾಥ್ (44) ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಸೋಲದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಸ್ಥಳೀಯ ನಿವಾಸಿ ಮಂಜುನಾಥ್, ಕೊಡಿಗೇಹಳ್ಳಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೂರು ತಿಂಗಳಿನಿಂದ ರಜೆ ಮೇಲಿದ್ದ ಅವರು ಸಂಬಂಧಿಕರ ತೋಟದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

 

‘ಪತ್ನಿ ಹಾಗೂ ಮಕ್ಕಳ ಜೊತೆ ಮಂಜುನಾಥ್ ವಾಸವಿದ್ದರು. ಕೆಲಸಕ್ಕೆ ಹೋಗದೇ ಸದಾ ಮನೆಯಲ್ಲಿರುತ್ತಿದ್ದ ಅವರು, ಯಾರೊಂದಿಗೂ ಹೆಚ್ಚು ಮಾತನಾಡುತ್ತಿರಲಿಲ್ಲ. ದೈಹಿಕವಾಗಿ ಕುಗ್ಗಿದ್ದ ಅವರು ಮಾನಸಿಕವಾಗಿ ನೊಂದಿದ್ದರು ಎಂದು ಗೊತ್ತಾಗಿದೆ’ ಎಂದೂ ತಿಳಿಸಿದರು.

‘ಪತ್ನಿ ಹಾಗೂ ಮಕ್ಕಳು ತುಮಕೂರಿನಲ್ಲಿರುವ ಸಂಬಂಧಿಕರ ಮನೆಗೆ ಇತ್ತೀಚೆಗೆ ಹೋಗಿದ್ದರು. ಗುರುವಾರ ರಾತ್ರಿ ತೋಟಕ್ಕೆ ಹೋಗಿದ್ದ ಮಂಜುನಾಥ್, ಅಲ್ಲಿಯೇ ಮರವೊಂದಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಶುಕ್ರವಾರ ಬೆಳಿಗ್ಗೆ ಮೃತದೇಹ ನೋಡಿದ್ದ ಸ್ಥಳೀಯರು, ಠಾಣೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಹೋಗಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು’ ಎಂದೂ ಪೊಲೀಸರು ಹೇಳಿದರು.

Leave a Reply

Your email address will not be published. Required fields are marked *

You may have missed

error: Content is protected !!