March 23, 2026

ಯುವತಿ ಮೇಲೆ ಆಸಿಡ್ ದಾಳಿ ನಡೆಸಿದ ಆರೋಪಿ ಪತ್ತೆಗಾಗಿ ಲುಕ್ಔಟ್ ನೋಟೀಸ್ ಜಾರಿ

0
Screenshot_20220501-174947_Chrome.jpg

ಬೆಂಗಳೂರು: ಬೆಂಗಳೂರಿನಲ್ಲಿ ಯುವತಿ ಮೇಲೆ ಆಸಿಡ್ ದಾಳಿ ನಡೆಸಿದ ಆರೋಪಿ ನಾಗೇಶ್ ಬಂಧನಕ್ಕಾಗಿ ಪೊಲೀಸರು ಲುಕ್‌ಔಟ್ ನೊಟೀಸ್ ಜಾರಿಗೊಳಿಸಿದ್ದಾರೆ.

ಪ್ರೀತಿ ನಿರಾಕರಿಸಿದ್ದಕ್ಕಾಗಿ ಯುವತಿ ಮೇಲೆ ಆರೋಪಿ ನಾಗೇಶ್ ಆಸಿಡ್ ದಾಳಿ ನಡೆಸಿದ್ದ. ಇದರಿಂದ ಗಂಭೀರ ಗಾಯಗೊಂಡ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ. ಆದರೆ ದಾಳಿ ನಡೆಸಿದ ಆರೋಪಿ ತಲೆ ಮರೆಸಿಕೊಂಡಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಲುಕ್ ಔಟ್ ನೊಟೀಸ್ ಜಾರಿ ಮಾಡಿದ್ದಾರೆ.

ಎಲ್ಲಾ ರಾಜ್ಯಗಳಿಗೆ, ಎಲ್ಲಾ ಭಾಷೆಗಳಲ್ಲಿಯೂ ಲುಕ್ ಔಟ್ ನೋಟಿಸ್ ನೀಡಲಾಗಿದ್ದು, ಆತನ ಬಗ್ಗೆ ಅಲರ್ಟ್ ಇರುವಂತೆ ಎಲ್ಲಾ ವಿಮಾನ ನಿಲ್ದಾಣ ಮತ್ತು ರೈಲ್ವೆ ಪೊಲೀಸರಲ್ಲಿ ಮನವಿ ಮಾಡಿದ್ದಾರೆ. ಅಲ್ಲದೆ, ಆರೋಪಿ ತಮಿಳುನಾಡಿನ ದೇವಸ್ಥಾನವೊಂದರಲ್ಲಿ ಅವಿತುಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಜ್ಯ ಪೊಲೀಸರು ಅಲ್ಲಿಗೆ ಭೇಟಿ ನೀಡಿ ಆರೋಪಿಗಾಗಿ ಹುಡುಕಾಡುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!