March 22, 2026

ವಿಟ್ಲ: ನೀರಿನ ಟ್ಯಾಂಕ್ ಗೆ ಬಿದ್ದ ಕಾಡುಕೋಣ: ಕಾಡಿನಿಂದ ನೀರು ಕುಡಿಯಲು ಬಂದಾಗ ನಡೆದ ಘಟನೆ

0
image_editor_output_image1840159611-1651469848970

ವಿಟ್ಲ: ಕಾಡಿನಿಂದ ನೀರು ಕುಡಿಯಲು ಬಂದ ಕಾಡುಕೋಣಯೊಂದು ನೀರಿನ ಟ್ಯಾಂಕ್ ಗೆ ಬಿದ್ದ ಘಟನೆ ಕನ್ಯಾನದಲ್ಲಿ ನಡೆದಿದೆ.

ಕಳೆಂಜೆಮಲೆ ರಕ್ಷಿತಾರಣ್ಯ ಕಾಡಿನಿಂದ ಕಾಡುಕೋಣ ನೀರು ಹುಡುಕಿಕೊಂಡು ನಾಡಿಗೆ ಬಂದಿದೆ.

ಕನ್ಯಾನ ಭಾರತ ಸೇವಾಶ್ರಮದ ನೀರಿನ ಟ್ಯಾಂಕ್ ನಲ್ಲಿ ನೀರು ಕುಡಿಯಲು ಯತ್ನಿಸಿದಾಗ ನೇರವಾಗಿ ಕೋಣ ಟ್ಯಾಂಕ್ ಗೆ ಜಾರಿ ಬಿದ್ದಿದೆ. ಇದರಿಂದ ಮೇಲೆ ಏಳಲಾಗದೇ ಟ್ಯಾಂಕ್ ನೊಳಗಡೆ ಕೋಣ ಬಾಕಿಯಾಗಿದೆ. ಮಧ್ಯರಾತ್ರಿ ಈ ಘಟನೆ ಸಂಭವಿಸಿದ್ದು, ಬೆಳಿಗ್ಗೆ ಆಶ್ರಮ ನಿವಾಸಿಗಳು ನೋಡಿದಾಗ ಘಟನೆ ಬೆಳಕಿಗ್ಗೆ ಬಂದಿದೆ. ಸ್ಥಳಕ್ಕೆ ವಿಟ್ಲ ಶಾಖೆಯ ಅರಣ್ಯಾಧಿಕಾರಿಗಳು ಭೇಟಿ ನೀಡಿ, ಕಾರ್ಯಾಚರಣೆ ಮುಂದುವರಿಸಿದ್ದಾರೆ. ಟ್ಯಾಂಕ್ ನಿಂದ ನೀರು ಖಾಲಿ ಮಾಡಲಾಗುತ್ತಿದ್ದು, ಅದರ ಮೂಲಕ ಕೋಣವನ್ನು ರಕ್ಷಿಸಲಾಗುತ್ತದೆ. ಟ್ಯಾಂಕ್ 5 ಅಡಿ ಆಳವಿದ್ದು, ಕೋಣಕ್ಕೆ ಯಾವುದೇ ಗಾಯಗಳಾಗಿಲ್ಲ ಎಂದು ಅರಣ್ಯ ಸಿಬ್ಬಂದಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!