May 15, 2026

ಚಿಕ್ಕೋಡಿ: ದ್ವಿಚಕ್ರ ವಾಹನ ಸವಾರನ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ

0
Screenshot_20220503-125345_Chrome.jpg

ಚಿಕ್ಕೋಡಿ: ದ್ವಿಚಕ್ರ ವಾಹನ ಸವಾರನ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ಮಾಡಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪೂರ- ಕಾತ್ರಾಳ ರಸ್ತೆ ನಡುವೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಕಾತ್ರಾಳ ಗ್ರಾಮದ ನಿವಾಸಿ ಚಿಂತಾಮಣಿ ಬಂಡಗರ (26) ಕೊಲೆಯಾದ ಯುವಕ.

ಕಳೆದ ಎರಡು ತಿಂಗಳ ಹಿಂದೆ ಐನಾಪೂರ ಗ್ರಾಮದಲ್ಲಿ ಮೆಡಿಕಲ್ ಶಾಪ್ ಹಾಕಿಕೊಂಡಿದ್ದ ಇವರು ಕೆಲಸ ಮುಗಿಸಿ ಐನಾಪೂರದಿಂದ ಕಾತ್ರಾಳ ಕಡೆ ತೆರಳುವಾಗ ತಡರಾತ್ರಿ 10 ಗಂಟೆ ಸುಮಾರಿಗೆ ಹಿಂಬದಿಯಿಂದ ಲಾಂಗ್ ನಿಂದ ಹೊಡೆದು ಕೊಲೆ ಮಾಡಲಾದ ಶಂಕೆ ವ್ಯಕ್ತವಾಗಿದೆ. ಮೃತಪಟ್ಟ ಚಿಂತಾಮಣಿ ಅವರು ಎಂಟು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

ಘಟನಾ ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!