ಕಾಸರಗೋಡು: ನೋಡನೋಡುತ್ತಿದ್ದಂತೆ ರಸ್ತೆ ಬದಿಯಲ್ಲಿದ್ದ ಬಾವಿಗೆ ಬಿದ್ದ ಕಾರು:
ಘಟನೆ ದೃಶ್ಯ ಸಿಸಿ ಕ್ಯಾಮಾರದಲ್ಲಿ ಸೆರೆ
ಬೇಕಲ್: ನಿಯಂತ್ರಣ ಕಳೆದುಕೊಂಡ ಕಾರೊಂದು ಬಾವಿಗೆ ಬಿದ್ದ ಘಟನೆ ಕಾಸರಗೋಡು ಸಮೀಪದ ಬೇಕಲ್ ನಲ್ಲಿ ನಡೆದಿದ್ದು, ಕಾರಿನಲ್ಲಿದ್ದ ಮೂರು ಯುವಕರನ್ನು ಪೊಲೀಸ್ ಮತ್ತು ಅಗ್ನಿಶಾಮಕ ದಳದ ಸಹಾಯದಿಂದ ಮೇಲಕ್ಕೆ ಎತ್ತಲಾಯಿತು.


ಘಟನೆ ಮಂಗಳವಾರ ಸಂಜೆ ಐದು ಗಂಟೆಗೆ ಪೂಚಕ್ಕಾಡ್ ಮಸೀದಿ ಬಾವಿಯ ಸಮೀಪ ಸಂಭವಿಸಿದೆ. ಅಪಘಾತದಲ್ಲಿ ಎಲ್ಲರೂ ಪಾರಾಗಿದ್ದಾರೆ. ಬೇಕಲ್ ಡಿ ವೈ ಎಸ್ ಪಿ ಸಿ.ಕೆ ಸುನಿಲ್ ಕುಮಾರ್ ನೇತೃತ್ವದಲ್ಲಿ ರಕ್ಷಣಾ ಕಾರ್ಯ ನಡೆಯಿತು.
ಈದುಲ್ ಫಿತ್ರ್ ಹಿನ್ನೆಲೆಯಲ್ಲಿ ಮಸೀದಿಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಮುಸ್ಲಿಮರು ಇದ್ದರು. ತಕ್ಷಣ ಕಾರ್ಯಾಚರಣೆಗೆ ಇಳಿದ ಯುವಕರು, ಹಗ್ಗದ ಸಹಾಯದಿಂದ ಬಾವಿಗಿಳಿದು ಕಾರಿನಲ್ಲಿದ್ದವರನ್ನು ರಕ್ಷಿಸಿದ್ದಾರೆ. ಅವರಿಗೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಕೂಡ ಸಾಥ್ ನೀಡಿದರು.




