ಕಾರ್ಕಳ: ಬೈಕ್ ಗೆ ಅಡ್ಡ ಬಂದ ನಾಯಿ: ಸವಾರ ಮೃತ್ಯು
ಕಾರ್ಕಳ: ದ್ವಿಚಕ್ರ ವಾಹನ ಚಲಾಯಿಸಿಕೊಂಡು ಹೋಗುತ್ತಿರುವಾಗ ನಾಯಿಯೊಂದು ರಸ್ತೆಗೆ ಅಡ್ಡಬಂದ ಕಾರಣ ಬ್ರೇಕ್ ಹಾಕಲು ಹೋಗಿ ಹಿರಿಯ ನಾಗರಿಕರೊಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಿಸದೆ ನಿನ್ನೆ ಸಾವನ್ನಪ್ಪಿದ ಘಟನೆ ಕಾರ್ಕಳದಲ್ಲಿ ನಡೆದಿದೆ.
ಅಜಿತ್ ಕುಮಾರ್ (63) ಮೃತಪಟ್ಟ ದುರ್ದೈವಿ.
ಕಾರ್ಕಳದ ಗೊಮ್ಮಟೇಶ್ವರ ಬೆಟ್ಟದ ಹಿಂಭಾಗದ ರಸ್ತೆಯಲ್ಲಿ ಸ್ಕೂಟರ್‌ನಲ್ಲಿ ಹೋಗುತ್ತಿರುವಾಗ ನಾಯಿ ರಸ್ತೆಗೆ ಅಡ್ಡ ಬಂದಿದೆ.
ಆ ಸಂದರ್ಭ ಒಮ್ಮೆಗೆ ಬ್ರೇಕ್ ಹಾಕಿದಾಗ ಸ್ಕೂಟರ್ ಸಮೇತ ರಸ್ತೆಗೆ ಬಿದ್ದಿದ್ದರು.
ಇದರಿಂಧ ಅವರಿಗೆ ತೀವ್ರವಾದ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಕೆಎಂಸಿ ಆಸ್ಪತ್ರೆಗೆ ಕರೆ ತರಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಾವನ್ನಪ್ಪಿದ್ದಾರೆ.
ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





