March 20, 2026

ವಿಟ್ಲ: ಹತ್ತನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ: ವಿಟ್ಲದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಸುಳ್ಯ ನಿವಾಸಿ

0
Death_Photo121212121212_photo_pic

ವಿಟ್ಲ: ಹತ್ತನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ನಡೆದಿದೆ.

ಮೂಲತಃ ಸುಳ್ಯ ತಾಲೂಕಿನ ಪಂಜ ನಿವಾಸಿ ಸಂಜೀವ ಅವರ ಪುತ್ರಿ ಆತ್ಮೀಕಾ(14) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.

ಈಕೆ ತನ್ನ ಕುಟುಂಬದೊಂದಿಗೆ ಕನ್ಯಾನ ಗ್ರಾಮದ ಕಣಿಯೂರು ದಿ. ಸುಲೈಮಾನ್ ಹಾಜಿ ಅವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇಂದು ಮನೆಮಂದಿ ಕೆಲಸಕ್ಕೆ ಹೋದಾಗ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!