ಮಂಗಳೂರಿನ ಪಿಲಿಕುಳ ಮೃಗಾಲಯಕ್ಕೆ ಸೇರಿದ ಬಿಳಿ ಹೆಣ್ಣು ಹುಲಿ, ಉಷ್ಟ್ರಪಕ್ಷಿ
ಮಂಗಳೂರು: ಕೇಂದ್ರ ಮೃಗಾಲಯ ಪ್ರಾಧಿಕಾರದ ಪ್ರಾಣಿ ವಿನಿಮಯ ಯೋಜನೆಯಡಿ ಚೆನ್ನೈನ ಅರಿಗ್ನಾರ್ ಅಣ್ಣಾ ಮೃಗಾಲಯದಿಂದ ಪಿಲಿಕುಳ ಮೃಗಾಲಯಕ್ಕೆ ಒಂದು ಬಿಳಿ ಹೆಣ್ಣು ಹುಲಿ ಕಾವೇರಿ ಮತ್ತು ಹೆಣ್ಣು ಉಷ್ಟ್ರ ಪಕ್ಷಿಯನ್ನು ತರಿಸಿಕೊಳ್ಳಲಾಗಿದೆ.
ಬದಲಾಗಿ ಮಂಗಳೂರಿನ ಪಿಲಿಕುಳ ಮೃಗಾಲಯದಿಂದ ಒಂದು ಬೆಂಗಾಲ್ ಹುಲಿ ಸಂಜಯ್, ನಾಲ್ಕು ಕಾಡುನಾಯಿಗಳು ಮತ್ತು ಕೆಲವು ಉರಗಗಳನ್ನು ಕಳುಹಿಸಿಕೊಡಲಾಗಿದೆ. ಪಿಲಿಕುಳದಲ್ಲಿ ಈಗಾಗಲೇ ಹನ್ನೊಂದು ಹುಲಿಗಳು (ಏಳು ಗಂಡು, ನಾಲ್ಕು ಹೆಣ್ಣು) ಮತ್ತು ಎರಡು ಗಂಡು ಉಷ್ಟ್ರ ಪಕ್ಷಿಗಳು ಇವೆ.
ಹೊಸ ಅತಿಥಿಯಾಗಿ ಆಗಮಿಸಿರುವ ಬಿಳಿ ಹುಲಿಯನ್ನು ಕ್ವಾರಂಟೈನ್‌ನಲ್ಲಿ ಪ್ರತ್ಯೇಕಿಸಿ ಇಡಲಾಗಿದ್ದು, ಸ್ಥಳೀಯ ಪರಿಸರಕ್ಕೆ ಒಗ್ಗಿದ ನಂತರ ವಾರದೊಳಗಾಗಿ ಸಾರ್ವಜನಿಕ ವೀಕ್ಷಣೆಗೆ ಅವಕಾಶ ನೀಡಲಾಗುತ್ತದೆ.





