December 16, 2025

ಪಿಎಸ್ಐ ನೇಮಕಾತಿಯ ಪರೀಕ್ಷೆಯಲ್ಲಿ ಅಕ್ರಮ: ಇಬ್ಬರು ಪೊಲೀಸ್ ಅಧಿಕಾರಿಗಳ ಬಂಧನ

0
image_editor_output_image-482027697-1651752159249.jpg

ಕಲಬುರಗಿ: ಪಿಎಸ್ಐ ನೇಮಕಾತಿಯ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ಮಹತ್ತರ ಹೆಜ್ಜೆ ಇಟ್ಟಿರುವ ಸಿಐಡಿ, ಗುರುವಾರ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಬಂಧಿಸಿದ್ದಾರೆ.

ರಾಯಚೂರು ಜಿಲ್ಲೆಯ ಲಿಂಗಸೂಗುರು ಡಿವೈಎಸ್‌ಪಿ ಮಲ್ಲಿಕಾರ್ಜುನ ಸಾಲಿ,  ಬೆರಳಚ್ಚು ವಿಭಾಗದ ಸಿಪಿಐ ಆನಂದ ಮೇತ್ರೆ ಬಂಧಿತ ಆರೋಪಿಗಳು. ಮಲ್ಲಿಕಾರ್ಜುನ ಸಾಲಿ ಈ ಹಿಂದೆ ಆಳಂದ ವಿಭಾಗದ ಡಿಎಸ್ಪಿಯಾಗಿದ್ದರು. ಇಲ್ಲಿಯವರೆಗೆ ಬಂಧಿತರ ಸಂಖ್ಯೆ 30 ದಾಟಿದೆ.

ನಿನ್ನೆಯಿಂದ ವಿಚಾರಣೆ ನಡೆಸಿದ್ದ ಸಿಐಡಿ ಅಧಿಕಾರಿಗಳು ಇಂದು ಸತತ ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿ, ಈ ಇಬ್ಬರು ಅಧಿಕಾರಿಗಳನ್ನು ಬಂಧಿಸಿ, ವೈದ್ಯಕೀಯ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು.

Leave a Reply

Your email address will not be published. Required fields are marked *

error: Content is protected !!