March 19, 2026

ಸರ್ಕಾರಿ ನೌಕರರು ಡಿ. 31ರೊಳಗೆ ಕಂಪ್ಯೂಟರ್ ಕಲಿಯದಿದ್ದರೆ ಮುಂಭಡ್ತಿ, ವೇತನ ಭಡ್ತಿ ಇಲ್ಲ: ಸರ್ಕಾರ ಆದೇಶ

0
Screenshot_2022-05-06-11-22-11-82_680d03679600f7af0b4c700c6b270fe7.jpg

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಡಿಸೆಂಬರ್ 31 ರೊಳಗೆ ಕಂಪ್ಯೂಟರ್ ಕಡ್ಡಾಯವಾಗಿ ಕಲಿಯದಿದ್ದರೆ ಹುದ್ದೆಯಲ್ಲಿ ಮುಂಬಡ್ತಿ, ವಾರ್ಷಿಕ ವೇತನ ಭಡ್ತಿ ಇಲ್ಲ ನೀಡಲಾಗುವುದಿಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗೆ ತಿದ್ದುಪಡಿ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈವರೆಗೆ ಅಧಿಸೂಚನೆ ಹೊರಡಿಸಿದ 10 ವರ್ಷದೊಳಗೆ ಪರೀಕ್ಷೆ ಪಾಸ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಅದಕ್ಕಾಗಿ 2012 ರಲ್ಲೇ ಸರ್ಕಾರ ನಿಯಮ ಜಾರಿಗೊಳಿಸಿತ್ತು.

ಈಗ ಮತ್ತೆ ನಿಯಮಕ್ಕೆ ತಿದ್ದುಪಡಿ ಮಾಡಿ ಎಲ್ಲಾ ಸರ್ಕಾರಿ ನೌಕರರು 2022 ಡಿಸೆಂಬರ್ ಅಂತ್ಯದೊಳಗೆ ಕಂಪ್ಯೂಟರ್ ಪರೀಕ್ಷೆ ಪಾಸ್ ಮಾಡಿಕೊಳ್ಳುವಂತೆ ಕಡ್ಡಾಯ ಮಾಡಿ ಗಡುವು ವಿಧಿಸಿದೆ.. ಸರ್ಕಾರಿ ಸೇವೆಯಲ್ಲಿರುವ ಡಿ ಗ್ರೂಪ್ ಹೊರತು ಪಡಿಸಿ ಎಲ್ಲ ನೌಕರರಿಗೂ ಈ ಆದೇಶ ಅನ್ವಯವಾಗಲಿದೆ.

Leave a Reply

Your email address will not be published. Required fields are marked *

error: Content is protected !!