March 19, 2026

ಪತ್ನಿ, ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆ ಮಾಡಿಕೊಂಡ ಪತಿ

0
image_editor_output_image1765394634-1651817404293.jpg

ಕೇರಳ: ವ್ಯಕ್ತಿಯೋರ್ವ ಪತ್ನಿ ಮತ್ತು ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ಮಲ್ಲಪುರಂ ಕೊಂಡಿಪರಂಬ ಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದರೆ, ಓರ್ವ ಬಾಲಕಿ ಜೀವನ್ಮರಣ ಹೋರಾಟದಲ್ಲಿದ್ದಾಳೆ.

ಮೊಹಮ್ಮದ್​ ಎಂಬಾತ ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳಿಗೆ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮೊಹಮ್ಮದ್, ಆತನ ಪತ್ನಿ ಮತ್ತು 11 ವರ್ಷದ ಪುತ್ರಿ ಸುಟ್ಟು ಕರಕಲಾಗಿದ್ದರೆ, ಐದು ವರ್ಷದ ಬಾಲಕಿ ಗಂಭೀರ ಸುಟ್ಟಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದು, ಜೀವನ್ಮರಣ ಸ್ಥಿತಿಯಲ್ಲಿದ್ದಾಳೆ.

ಮೊಹಮ್ಮದ್ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಆಟೋ ರಿಕ್ಷಾದಲ್ಲಿ ಕರೆದುಕೊಂಡು ಹೋಗಿ ಬೆಂಕಿ ಹಚ್ಚಿದ್ದಾನೆ. ಬಳಿಕ ತಾನೂ ಬೆಂಕಿ ಹಚ್ಚಿಕೊಂಡು ಅಲ್ಲೇ ಇದ್ದ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಯಾವ ಕಾರಣಕ್ಕೆ ಕೊಲೆ ನಡೆದಿದೆ ಎಂದು ತಿಳಿದು ಬಂದಿಲ್ಲ. ತನಿಖೆ ನಡೆದ ಬಳಿಕವೇ ಕೊಲೆ ಮತ್ತು ಆತ್ಮಹತ್ಯೆಗೆ ಕಾರಣ ಗೊತ್ತಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!