May 14, 2026

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್

0
Pramod-Madhwaraj-750.jpg

ಉಡುಪಿ: ಮಾಜಿ ಸಚಿವ ಹಾಗೂ ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಪತ್ರ ಬರೆಯುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಪ್ರಮೋದ್ ಮಧ್ವರಾಜ್ ರಾಜೀನಾಮೆಯನ್ನು ಘೋಷಿಸಿದ್ದಾರೆ. ಬಿಜೆಪಿ ಸೇರ್ಪಡೆಗ ಗ್ರೀನ್ ಸಿಗ್ನಲ್ ದೊರೆತ ಬೆನ್ನಲ್ಲೇ ಪ್ರಮೋದ್ ಮಧ್ವರಾಜ್ ರಾಜೀನಾಮೆ ನಿರ್ಧಾರವನ್ನು ಘೋಷಿಸಿದ್ದಾರೆ ಎನ್ನಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ಗೆ ಪತ್ರ ಬರೆದಿರುವ ಪ್ರಮೋದ್ ಮಧ್ವರಾಜ್ ಇಷ್ಟು ವರ್ಷಗಳ ಕಾಲ ನನಗೆ ಕಾಂಗ್ರೆಸ್ ಪಕ್ಷದಲ್ಲಿ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಕ್ಕೆ ಧನ್ಯವಾದಗಳು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನನಗೆ ಸಚಿವ ಸ್ಥಾನವನ್ನು ನೀಡಿ ಜನರ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಕ್ಕೆ ಆಭಾರಿಯಾಗಿದ್ದೇನೆ. ಆದರೆ ಉಡುಪಿ ಜಿಲ್ಲಾ ಕಾಂಗ್ರೆಸ್ನಲ್ಲಿ ನನಗೆ ಮುಂದುವರಿಯಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಲು ವಿಷಾದ ವ್ಯಕ್ತಪಡಿಸುತ್ತೇನೆ. ನನಗೆ ಕೆಪಿಸಿಸಿ ಉಪಾಧ್ಯಕ್ಷನ ಸ್ಥಾನವನ್ನು ನೀಡಿದ್ದೀರಿ. ಆದರೆ ಇದನ್ನು ಒಪ್ಪಿಕೊಳ್ಳಲು ನನ್ನಿಂದ ಸಾಧ್ಯವಾಗುತ್ತಿಲ್ಲ. ಹೀಗಾಗಿ ನಾನು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ಸುದೀರ್ಘವಾಗಿ ಬರೆದಿದ್ದಾರೆ.

Leave a Reply

Your email address will not be published. Required fields are marked *

error: Content is protected !!