July 6, 2026

ಮಂಗಳೂರು: ತ್ಯಾಜ್ಯ ಸುರಿಯುವ ವಿಚಾರದಲ್ಲಿ ವ್ಯಕ್ತಿಯ ಮೇಲೆ ಹಲ್ಲೆ: ಇಬ್ಬರ ಬಂಧನ

0
Screenshot_20220507-180109_Chrome.jpg

ಮಂಗಳೂರು: ಅತ್ತಾವರದ ಅಂಬಿಕಾ ಮ್ಯಾನ್ಷನ್ ಅಪಾರ್ಟ್‌ಮೆಂಟ್‌ನಲ್ಲಿ ಬಿಪುಲ್‌ಕುಮಾರ್ ಎಂಬಾತನ ಮೇಲೆ ಹಲ್ಲೆ ಮೇ 4 ರಂದು ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ನಗರ ದಕ್ಷಿಣ ಪೊಲೀಸರು ಬಂಧಿಸಿದ್ದಾರೆ.

ಬಿಶ್ವನಾಥ್, ಮಧುಸೂದನ್ ಅಮೃತ, ರಾಜೇಶ್, ನೀರಜ್ ಮತ್ತಿತರರು ತ್ಯಾಜ್ಯ ಸುರಿಯುವ ವಿಚಾರವಾಗಿ ಬಿಪುಲ್‌ಕುಮಾರ್ ಮೇಲೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ.

ಪೊಲೀಸರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 143, 147, 148, 323, 324, 307, 448, ಆರ್/ಡಬ್ಲ್ಯು 149 ಮತ್ತು 2ಎ ಕೆಪಿಡಿಎಲ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಬಂಧಿತ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದು, ಪ್ರಕರಣದ ಇತರ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!