ಪಾಟ್ನಾ ಗಾಂಧಿ ಮೈದಾನ ಸ್ಫೋಟ ಪ್ರಕರಣ:
4 ಮಂದಿಗೆ ಮರಣದಂಡನೆ, ಇಬ್ಬರಿಗೆ ಜೀವಾವಧಿ ಶಿಕ್ಷೆ ಪ್ರಕಟ
ಪಾಟ್ನಾ: ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ರ್ಯಾಲಿಯಲ್ಲಿ 2013ರ ಸರಣಿ ಸ್ಫೋಟ ಪ್ರಕರಣದಲ್ಲಿ ನಾಲ್ವರು ಅಪರಾಧಿಗಳಿಗೆ ಸೋಮವಾರ ಮರಣದಂಡನೆ ವಿಧಿಸಲಾಯಿತು.
ಅಕ್ಟೋಬರ್ 27 ರಂದು ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನ್ಯಾಯಾಲಯವು ಪಾಟ್ನಾದ ಗಾಂಧಿ ಮೈದಾನ್ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ 10 ಆರೋಪಿಗಳ ಪೈಕಿ ಒಂಬತ್ತು ಮಂದಿ ತಪ್ಪಿತಸ್ಥರು ಎಂದು ಘೋಷಿಸಿತು, ಇದರಲ್ಲಿ ಆರು ಜನರು ಸಾವನ್ನಪ್ಪಿದರು ಮತ್ತು 80 ಮಂದಿ ಗಾಯಗೊಂಡಿದ್ದರು.
ಇಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಾಗಿದ್ದು, ನಾಲ್ವರು ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದ್ದು ಇಬ್ಬರಿಗೆ ಜೀವಾವಧಿ ಶಿಕ್ಷೆ ಹಾಗೂ ಇಬ್ಬರಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಒಬ್ಬ ಆರೋಪಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.





