ಉಡುಪಿ ಶ್ರೀಕೃಷ್ಣ ಮಠದಲ್ಲಿ ಸರದಿ ಸಾಲಿನಲ್ಲಿ ನಿಂತಿದ್ದ ಭಕ್ತ ಕುಸಿದು ಬಿದ್ದು ಸಾವು
ಉಡುಪಿ: ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶ್ರೀಕೃಷ್ಣ ಮಠಕ್ಕೆ ದೇವರ ದರ್ಶನ ಪಡೆಯಲು ಸರದಿ ಸಾಲಿನಲ್ಲಿ ಸಾಗುತ್ತಿದ್ದ ಭಕ್ತರೊಬ್ಬರು ದಿಡೀರ್ ಅಸ್ವಸ್ಥಗೊಂಡು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.
ಬೆಂಗಳೂರಿನ ಮೋಹನ್ (70) ಮೃತ ಯಾತ್ರಾರ್ಥಿಯಾಗಿದ್ದಾರೆ. ಕುಸಿದು ಬಿದ್ದಿದ್ದ ಅವರನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಒಳಕಾಡು ಅವರು ಶ್ರೀಕೃಷ್ಣ ಮಠದ ರಕ್ಷಣ ಸಿಬಂದಿ ಸಹಕಾರದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.




