March 22, 2026

ಮಡಿಕೇರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ ಮೆಟ್ರೊ ಪಿಲ್ಲರ್‌ಗೆ ಡಿಕ್ಕಿ: ನಾಲ್ವರು ಗಂಭೀರ, 25 ಮಂದಿಗೆ ಗಾಯ

0
image_editor_output_image-1391526076-1652073303377.jpg

ಬೆಂಗಳೂರು: ಮಡಿಕೇರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಕೆಂಗೇರಿ ಬಳಿಯ ಮೆಟ್ರೊ ಪಿಲ್ಲರ್‌ಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. 25 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

‘ಕೆ.ಆರ್‌.ನಗರ ಡಿಪೊಗೆ ಸೇರಿದ ಬಸ್‌, ಮಡಿಕೇರಿಯಿಂದ ನಗರಕ್ಕೆ ಬರುತ್ತಿದ್ದಾಗ ಕೆಂಗೇರಿಯ ಪೂರ್ಣಿಮಾ ಪ್ಯಾಲೇಸ್ ಬಳಿಯ ಮೆಟ್ರೊ ಪಿಲ್ಲರ್ 545ಕ್ಕೆ ಡಿಕ್ಕಿಯಾಗಿದೆ. ರಾತ್ರಿ 1.30ರ ಸುಮಾರಿಗೆ ಘಟನೆ ನಡೆದಿದೆ.

ಬಸ್‌ನಲ್ಲಿ ಸುಮಾರು 45 ಪ್ರಯಾಣಿಕರಿದ್ದರು. ಗಾಯಗೊಂಡವರನ್ನೆಲ್ಲಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!