ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರೊಬ್ಬರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು
ನವದೆಹಲಿ: 32 ವರ್ಷದ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರೊಬ್ಬರ ಮೇಲೆ ದೆಹಲಿ ಪೊಲೀಸರು ಭಾನುವಾರ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.
‘2013ರಲ್ಲಿ ಆರೋಪಿಯನ್ನು ನಾನು ಭೇಟಿಯಾಗಿದ್ದೆ ಮತ್ತು ನಂತರ ನಮ್ಮಿಬ್ಬರ ನಡುವೆ ಸ್ನೇಹ ಬೆಳೆದಿತ್ತು’ ಎಂದು ಯುಪಿಎಸ್‌ಸಿ ಆಕಾಂಕ್ಷಿ ಮಹಿಳೆ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
‘ಆಕೆಯ ದೂರಿನ ಆಧಾರದ ಮೇಲೆ ಇದೇ ವರ್ಷ ಏಪ್ರಿಲ್ 6ರಂದು ವ್ಯಕ್ತಿಯ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ, ಎಫ್‌ಐಆರ್ ಕೂಡ ಹಾಕಲಾಗಿದೆ. ವಿಚಾರಣೆ ನಡೆಸಲಾಗುತ್ತಿದೆ. ಆದರೆ, ಈ ವರೆಗೆ ಬಂಧನ ಕ್ರಮವನ್ನು ಜರುಗಿಸಿಲ್ಲ’ ಎಂದು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.




