March 23, 2026

ಉಡುಪಿ: ಮನೆಯಲ್ಲಿ ತಾಯಿ – ಮಗಳ ಮೃತದೇಹ ಪತ್ತೆ

0
n3846870341652103620423000df828917b0065ade006a6274082ee13caf009033df19e504e7d10a878c2aa.jpg

ಉಡುಪಿ: ಉಡುಪಿಯ ಆತ್ರಾಡಿ ಮದಗದ ಬಳಿ ಇರುವ ಮನೆಯೊಂದರಲ್ಲಿ ತಾಯಿ ಮಗಳ ಶವ ಪತ್ತೆಯಾಗಿದ್ದು, ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

ಮೃತರನ್ನು ತಾಯಿ ಚೆಲುವಿ(30) ಮಗಳು ಪ್ರಿಯಾ (10) ಎಂದು ಗುರುತಿಸಲಾಗಿದೆ.

ಮನೆಯ ಕೋಣೆಯಲ್ಲಿ ತಾಯಿ – ಮಗಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೃತದೇಹಗಳ ಬಾಯಿಯಲ್ಲಿ ರಕ್ತದ ಕಲೆ ಕಂಡುಬಂದಿರುವುದು ಸಂಶಯಕ್ಕೆ ಎಡೆಮಾಡಿದೆ. ಮಣಿಪಾಲದ ಖಾಸಗಿ ಸಂಸ್ಥೆಯಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡಿಕೊಂಡಿದ್ದ ಚೆಲುವಿ, ತನ್ನಿಬ್ಬರ ಮಕ್ಕಳೊಂದಿಗೆ ತಾಯಿ ಮನೆಯಲ್ಲಿ ವಾಸವಿದ್ದರು. ಭಾನುವಾರ ಚೆಲುವಿ ಅವರ ತಾಯಿ ಮತ್ತು ಮಗ ಊರಿಗೆ ಹೋಗಿದ್ದಾರೆ. ಮನೆಯಲ್ಲಿ ಚೆಲುವಿ ಮತ್ತು ಮಗಳು ಮಾತ್ರ ಇದ್ದರು. ಬೆಳಿಗ್ಗೆ ಸ್ಥಳೀಯ ಮನೆಯವರಿಗೆ ಕರೆ ಮಾಡಿ ಚೆಲುವಿಯ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಚೆಲುವಿಯ ತಾಯಿ ಮಾಹಿತಿ ನೀಡಿದ್ದು, ಸ್ಥಳೀಯರು ಮನೆಗೆ ತೆರಳಿದಾಗ ಬಾಗಿಲು ಅರ್ಧ ತೆರೆದಿದ್ದು, ಒಳ ಹೋಗಿ ನೋಡಿದಾಗ ಮೃತ ದೇಹ ಪತ್ತೆಯಾಗಿದೆ

ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು ಮತ್ತುಎಫ್ ಎಸ್ ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸ್ಥಳಕ್ಕೆ ಭೇಟಿ ನೀಡಿರುವ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!