ಕುಣಿಗಲ್: ರಸ್ತೆ ಅಪಘಾತ, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು, 6 ಮಂದಿ ಗಂಭೀರ
ಕುಣಿಗಲ್: ಕಾರು ಡಿವೈಡರ್‌ಗೆ ಢಿಕ್ಕಿ ಹೊಡೆದ ರಬಸಕ್ಕೆ, ಕಾರು ಹಾರಿ ಪಕ್ಕದ ರಸ್ತೆಯಲ್ಲಿ ಹೋಗುತ್ತಿದ್ದ ಟೆಂಪೋ ಟ್ರಾವಲ್ಸ್ ಗೆ ಅಪ್ಪಳಿಸಿದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ, ಮೂವರು ಸ್ಥಳದಲ್ಲೇ ಮೃತಪಟ್ಟು, 6 ಮಂದಿ ಗಂಭೀರ ಗಾಯಗೊಂಡ ಘಟನೆ ಪಟ್ಟಣದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 75 ಬಿ.ಎಂ ಬೇಗೂರು ಸಮೀಪ ಮಂಗಳವಾರ ಬೆಳಗಿನ ಜಾವ ಸಂಭವಿಸಿದೆ.
ರಾಮಯ್ಯ, ರಘು (38), ಹೆಬ್ಬಾಳ ಬಿ.ಎಲ್ ಸರ್ಕಲ್ ನ ವಿಜಯ್ (36), ಹಾಗೂ ಸಂತೋಷ ಮೃತಪಟ್ಟ ದುರ್ಧೈವಿಗಳು.
ಕಾರು ಚಾಲಕ ಲೋಕೇಶ್ ತೀವ್ರವಾಗಿ ಗಾಯಗೊಂಡು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಟೆಂಪೋದಲ್ಲಿ ಪ್ರಯಾಣಿಸುತ್ತಿದ್ದ ವಸಂತ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ.




