February 2, 2026

ಪಾಂಡೇಶ್ವರ: ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಮೃತದೇಹ ಪತ್ತೆ

0
Screenshot_2022-05-11-11-42-54-87_680d03679600f7af0b4c700c6b270fe7.jpg

ಮಂಗಳೂರು: ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಬಗ್ಗೆ ಪ್ರಕರಣ ದಾಖಲಾಗಿದೆ.

ಮೃತ ವಿದ್ಯಾರ್ಥಿಯನ್ನು ಕೇರಳ ಮೂಲದ ಈಡುಕ್ಕಿ ಜಿಲ್ಲೆಯ ನಿವಾಸಿ ಪ್ರಸ್ತುತ ನಗರದ ಮೆಡಿಕಲ್ ಕಾಲೇಜು ವಿದ್ಯಾರ್ಥಿಯಾಗಿರುವ ರೋಸನ್ ಜೋಸ್ (21) ಎಂದು ಗುರುತಿಸಲಾಗಿದೆ.

ಈತ ಸೋಮವಾರ ರಾತ್ರಿ ಊಟ ಮಾಡಿ ಕಾಲೇಜು ಹಾಸ್ಟೇಲ್ ರೂಮಿನಲ್ಲಿಮಲಗಿದ್ದ. ಮಂಗಳವಾರ ಬೆಳಗ್ಗೆ ಆತನ ತಂದೆ ಕರೆ ಮಾಡಿದ್ದಾಗ ಕರೆ ಸ್ವೀಕರಿಸಿಲ್ಲ. ಇದರಿಂದ ಗಾಬರಿಗೊಂಡ ತಂದೆ ರೂಮ್ ಪಕ್ಕದಲ್ಲಿರುವ ಮತ್ತೊಬ್ಬ ವಿದ್ಯಾರ್ಥಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.

ಕೂಡಲೇ ಉಳಿದ ವಿದ್ಯಾರ್ಥಿಗಳು ಸೇರಿ ರೂಮು ಬಾಗಿಲು ಬಡಿದಾಗ ಯಾವುದೇ ಸ್ಪಂದನೆ ಸಿಗಲಿಲ್ಲ. ತಕ್ಷಣ ಹಾಸ್ಟೆಲ್ ಸಿಬ್ಬಂದಿಯ ಗಮನಕ್ಕೆ ತಂದು ಬಾಗಿಲು ಒಡೆದು ನೋಡಿದಾಗ ಮಲಗಿದ ಸ್ಥಿತಿಯಲ್ಲೇ ಬಿದ್ದುಕೊಂಡಿದ್ದು, ಆತನನ್ನು ತಪಾಸಣೆ ನಡೆಸಿದಾಗ ಮೃತಪಟ್ಟಿರುವುದು ತಿಳಿದು ಬಂದಿದೆ.

ವಿಷಯ ತಿಳಿದ ಪಾಂಡೇಶ್ವರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಅನುಮಾನಾಸ್ಪದ ಸಾವು ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!