ಐಪಿಸಿ ಸೆಕ್ಷನ್ 124ಎ “ದೇಶದ್ರೋಹ” ಪ್ರಕರಣ ದಾಖಲಿಸದಂತೆ ಸುಪ್ರೀಂ ಕೋರ್ಟ್
ನವದೆಹಲಿ: ಕೇಂದ್ರ ಸರ್ಕಾರವು ಮರುಪರಿಶೀಲನೆ ಪೂರ್ಣಗೊಳಿಸುವ ವರೆಗೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 124ಎ (ದೇಶದ್ರೋಹ) ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸದೇ ಇರುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಬುಧವಾರ ಸೂಚನೆ ನೀಡಿದೆ.
ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ, ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ಹಿಮಾ ಕೊಹ್ಲಿ ಅವರಿದ್ದ ನ್ಯಾಯಪೀಠ, ಮಧ್ಯಂತರ ಆದೇಶ ನೀಡಿದೆ.
ಕೇಂದ್ರ ಸರ್ಕಾರವು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸುವ ವರೆಗೆ ಸರ್ಕಾರಗಳು ದೇಶದ್ರೋಹ ಪ್ರಕರಣವನ್ನು ಬಳಸಿಕೊಳ್ಳುವಂತಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.




