February 2, 2026

ವಿಟ್ಲ: ಅಣ್ಣನಿಂದ ತಮ್ಮನ ಹತ್ಯೆ ಪ್ರಕರಣ: ಆರೋಪಿಯ ಬಂಧನ-ಭತ್ತದ ಫಸಲಿನಲ್ಲಿ ಪಾಲು ಕೇಳಿದ್ದಕ್ಕೆ ಹತ್ಯೆ ಮಾಡಿದ ಅಣ್ಣ

0
image_editor_output_image1440761910-1652274617373

ವಿಟ್ಲ: ಕನ್ಯಾನ ಗ್ರಾಮದ ಶಿರಂಕಲ್ಲು ಎಂಬಲ್ಲಿ ನಡೆದ ಸಹೋದರರ ನಡುವೆ ಗಲಾಟೆ ನಡೆದು ಅಣ್ಣನೇ ತಮ್ಮನ್ನನ್ನು ಕೊಲೆಗೈದ ಘಟನೆಗೆ ಸಂಬಂಧಿಸಿ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಕನ್ಯಾನ ಗ್ರಾಮದ ಶಿರಂಕಲ್ಲು ನಿವಾಸಿ ಐತಪ್ಪ ನಾಯ್ಕ್(45) ಬಂಧಿತ ಆರೋಪಿ.

ಎಣ್ಮಕಜೆ ಗ್ರಾಮದ ಅಡ್ಯನಡ್ಕ ನಿವಾಸಿ ಬಾಲಪ್ಪ ನಾಯ್ಕ್ ಅವರು ಮಂಗಳವಾರ ಸಂಜೆ ತರವಾಡು ಮನೆಗೆ ತನ್ನ ತಾಯಿ ಜತೆ ಬಂದಿದ್ದರು.

ಲಮಂಗಳವಾರ ಹೊಸ ಮನೆಯಲ್ಲಿ ಗೊಂದೋಳು ಪೂಜೆ ನಡೆಯುತ್ತಿದ್ದು, ಈ ವೇಳೆ ಸಹೋದರರಿಬ್ಬರೂ ತಕಾರಾರು ಇರುವ ಜಾಗದಲ್ಲಿ ಬೆಳೆದ ಭತ್ತ ಫಸಲಿನಲ್ಲಿ ಪಾಲು ಕೇಳಿದ ವಿಚಾರವಾಗಿ ಗಲಾಟೆ ಉಂಟಾಗಿದೆ.
ಜಗಳ ತಾರಕ್ಕಕ್ಕೇರಿ ಅಣ್ಣ ತಮ್ಮನನ್ನು ಮರದ ತುಂಡಿನಿಂದ ಹೊಡೆದು ಹತ್ಯೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದರು. ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!