July 4, 2026

ನೊಯಿಡಾ: ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ, ಐವರು ಮೃತ್ಯು

0
image_editor_output_image-1112631356-1652333840519.jpg

ನೊಯಿಡಾ: ಉತ್ತರ ಪ್ರದೇಶದ ಗ್ರೇಟರ್‌ ನೊಯಿಡಾದಲ್ಲಿರುವ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಕರ್ನಾಟಕದ ಒಬ್ಬರು ಹಾಗೂ ಮಹಾರಾಷ್ಟ್ರದ ನಾಲ್ಕು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹೀಂದ್ರ ಬೊಲೆರೊ ಹಾಗೂ ಟ್ರಕ್‌ ನಡುವೆ ಅಪಘಾತ ಸಂಭವಿಸಿದೆ.

ಗೌತಮ್ ಬುದ್ಧ ನಗರ ಪೊಲೀಸ್‌ ವಕ್ತಾರರೊಬ್ಬರು ಈ ಕುರಿತು ಮಾಹಿತಿ ನೀಡಿದ್ದು, ‘ಏಳು ಜನರಿದ್ದ ಮಹೀಂದ್ರ ಬೊಲೆರೊ ಆಗ್ರಾದಿಂದ ನೋಯಿಡಾದತ್ತ ತೆರಳುತ್ತಿತ್ತು. ಈ ವೇಳೆ ಎದುರಿನಿಂದ ಬರುತ್ತಿದ್ದ ಟ್ರಕ್‌ವೊಂದಕ್ಕೆ ಜೆವರಾ ಟೋಲ್‌ ಬಳಿ ಡಿಕ್ಕಿ ಹೊಡೆದಿದೆ’ ಎಂದು ಮಾಹಿತಿ ನೀಡಿದ್ದಾರೆ.

ಘಟನೆಯಲ್ಲಿ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದೂ ಹೇಳಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!