ಮೈಲುಕಲ್ಲು: ಚಲಿಸುತ್ತಿದ್ದ ಬೈಕ್ ನಿಂದ ಬಿದ್ದು ಮಹಿಳೆ ಮೃತ್ಯು
ಹೆಬ್ರಿ: ಚಲಿಸುತ್ತಿದ್ದ ಬೈಕ್ ನ ಹಿಂಬದಿ ಕುಳಿತಿದ್ದ ಮಹಿಳೆ ಕೆಳಗೆ ಬಿದ್ದು ಮೃತಪಟ್ಟ ಘಟನೆ ವರಂಗ ಗ್ರಾಮದ ಮೈಲುಕಲ್ಲು ಎಂಬಲ್ಲಿ ನಡೆದಿದೆ.
ಸುನಿತಾ (45) ಮೃತಪಟ್ಟ ಮಹಿಳೆ. ವರಂಗ ಕಡೆಯಿಂದ ಉಪ್ಪಳ ಕಡೆಗೆ ಬೈಕ್‌ನಲ್ಲಿ ಹೋಗುತ್ತಿರುವ ವೇಳೆ ಕೆಳಗೆ ಬಿದ್ದು, ತಲೆಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ.




