March 22, 2026

ಉಡುಪಿ: ಖಾಸಗಿ ಬಸ್ ಪಲ್ಟಿ, ಹಲವರಿಗೆ ಗಾಯ

0
n3856505561652362021439044149c627d71284bc8ab7f61ca0cfa90d1be0bc261d3cf6f25b9e2503952725.jpg

ಉಡುಪಿ: ಮಂಗಳೂರಿನಿಂದ ಉಡುಪಿ ಕಡೆಗೆ ಬರುತಿದ್ದ ಖಾಸಗಿ ಬಸ್ ಪಲ್ಟಿಯಾಗಿರುವ ಘಟನೆ ಉದ್ಯಾವರದ ಬಲಾಯಿಪಾದೆ ಬಳಿ ನಡೆದಿದೆ.

ಬಲಾಯಿಪಾದೆಯ ಬಳಿ ಬ್ಯಾರಿಕೇಡ್ ದಾಟುವಾಗ ಡಿವೈಡರ್ ಮೇಲೆ ಖಾಸಗಿ ಎಕ್ಸ್ ಪ್ರೆಸ್ ಬಸ್ ಮಗುಚಿ ಬಿದ್ದಿದ್ದು, 20 ಮಂದಿ ಪ್ರಯಾಣಿಕರು ಗಾಯಗೊಂಡು ಉಡುಪಿ ಮತ್ತು‌ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸ್ಥಳಕ್ಕೆ ಉಡುಪಿ ಸಂಚಾರಿ ಠಾಣಾ ಪೋಲಿಸರು ಭೇಟಿ ಪರಿಶೀಲನೆ ನಡೆಸಿದ್ದು, ಸಾರ್ವಜನಿಕರ ಸಹಕಾರದೊಂದಿಗೆ ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಪೋಲಿಸರು ಹೊರ ತೆಗೆದಿದ್ದಾರೆ. ಇನ್ನು ಘಟನೆಯಿಂದಾಗಿ ಸ್ಥಳದಲ್ಲಿ ಟ್ರಾಫಿಕ್ ಜಾಂ ಉಂಟಾಗಿದ್ದು, ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ.

Leave a Reply

Your email address will not be published. Required fields are marked *

error: Content is protected !!