November 24, 2026

ಉಪಚುನಾವಣೆ:
ಸಿಂದಗಿಯಲ್ಲಿ ಬಿಜೆಪಿ, ಹಾನಗಲ್ ನಲ್ಲಿ ಕಾಂಗ್ರೆಸ್ ಮುನ್ನಡೆ

0
image_editor_output_image-997297417-1635827541522.jpg

ಬೆಂಗಳೂರು: ಸಿಂದಗಿ ಹಾಗೂ ಹಾನಗಲ್‌ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು ಬೆಳಿಗ್ಗೆ 8 ಗಂಟೆಗೆ ಆರಂಭವಾಗಿದೆ.

ವಿಜಯಪುರ ನಗರದ ಸೈನಿಕ ಶಾಲೆಯ ‘ಒಡೆಯರ ಹೌಸ್’ನಲ್ಲಿ ಸಿಂದಗಿ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದೆ. ಒಟ್ಟು 22 ಸುತ್ತು ಮತ ಎಣಿಕೆ ನಡೆದಿದೆ. ಹಾವೇರಿ ನಗರದ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಹಾನಗಲ್‌ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದೆ.

ಹಾನಗಲ್ ಉಪಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್‌ ಮುನ್ನಡೆ ಸಾಧಿಸಿದೆ.

ಹಾನಗಲ್ ಉಪಚುನಾವಣೆ: ಇದುವರೆಗಿನ ಒಟ್ಟು ಫಲಿತಾಂಶ (3 ಸುತ್ತು ಸೇರಿ)

ಬಿಜೆಪಿ- ಶಿವರಾಜ ಸಜ್ಜನರ- 13375
ಕಾಂಗ್ರೆಸ್- ಶ್ರೀನಿವಾಸ ಮಾನೆ- 13414
ಜೆಡಿಎಸ್- ನಿಯಾಜ್ ಶೇಖ್- 115

ಸಿಂದಗಿ ವಿಧಾನಸಭಾ ಉಪ ಚುನಾವಣೆ ನಾಲ್ಕನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದೆ.

ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರಿಗಿಂತ 7008 ಮತಗಳ ಮುನ್ನಡೆ ಸಾಧಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!