ಬಂಟ್ವಾಳ: ಕೆಎಎಸ್ ಅಧಿಕಾರಿ ಡಾ| ಸ್ಮಿತಾ ರಾಮು ಬಂಟ್ವಾಳ ತಹಶೀಲ್ದಾರ್ ಆಗಿ ನೇಮಕ
ಬಂಟ್ವಾಳ: ಮಂಡ್ಯ ಜಿಲ್ಲೆಯ ಚುನಾವಣಾ ಶಾಖೆಯ ತಹಶೀಲ್ದಾರ್, 2015ನೇ ಬ್ಯಾಚ್‌ನ ಕೆಎಎಸ್ ಅಧಿಕಾರಿ ಡಾ| ಸ್ಮಿತಾ ರಾಮು ಅವರನ್ನು ಬಂಟ್ವಾಳ ತಹಶೀಲ್ದಾರ್ ಆಗಿ ನಿಯೋಜಿಸಿ ರಾಜ್ಯ ಸರಕಾರ ಆದೇಶ ನೀಡಿದೆ.
ಈ ಹಿಂದೆ ರಶ್ಮಿ ಎಸ್.ಆರ್.ಅವರು ಬಂಟ್ವಾಳ ತಹಶೀಲ್ದಾರ್ ಆಗಿದ್ದು, ಅವರನ್ನು ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ವರ್ಗಾವಣೆ ಮಾಡಿದ ಬಳಿಕ ಬಂಟ್ವಾಳ ತಹಶೀಲ್ದಾರ್ ಹುದ್ದೆ ಖಾಲಿಯಾಗಿತ್ತು. ಡಾ| ಸ್ಮಿತಾ ಅವರು ಮೂಲದಲ್ಲಿ ದಂತ ವೈದ್ಯೆಯಾಗಿದ್ದಾರೆ.
ಮಂಗಳೂರಿನ ಏನಪೋಯ ದಂತ ವೈದ್ಯಕೀಯ ಕಾಲೇಜಿನಲ್ಲಿ ಬಿಡಿಎಸ್ ಪದವಿ ಪಡೆದಿರುವ ಅವರು ಬಳಿಕ ಸುಮಾರು 14 ವರ್ಷಗಳ ಕಾಲ ಮಂಡ್ಯ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನಲ್ಲಿ ವೈದ್ಯೆಯಾಗಿ ಕರ್ತವ್ಯ ನಿರ್ವಹಿಸಿದ್ದರು





