February 2, 2026

ಹಳೆಯ ವಾಹನಗಳ ನೋಂದಣಿ ಶುಲ್ಕ, ದಂಡದ ಮೊತ್ತ ಹೆಚ್ಚಳಕ್ಕೆ ಹೈಕೋರ್ಟ್‌ ತಡೆ

0
image_editor_output_image-1248872859-1652419824654.jpg

ಬೆಂಗಳೂರು: ಹಳೆಯ ವಾಹನಗಳ ನೋಂದಣಿ ಮತ್ತು ಕ್ಷಮತಾ ಪ್ರಮಾಣಪತ್ರ ನವೀಕರಣಕ್ಕೆ ಶುಲ್ಕ ಮತ್ತು ದಂಡದ ಮೊತ್ತ ಹೆಚ್ಚಿಸಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ 2021ರ ಅಕ್ಟೋಬರ್‌ 4ರಂದು ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಾಂತರ ತಡೆ ನೀಡಿದೆ.

ಕರ್ನಾಟಕ ಲಾರಿ ಮಾಲಕರ ಒಕ್ಕೂಟ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ| ಹೇಮಂತ್‌ ಚಂದನಗೌಡರ್‌ ಅವರಿದ್ದ ರಜಾಕಾಲದ ವಿಶೇಷ ಏಕಸದಸ್ಯ ನ್ಯಾಯಪೀಠ  ತಡೆ ನೀಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಈ ವರ್ಷದ ಎ. 1ರಿಂದ ಅನ್ವಯವಾಗುವಂತೆ 15 ವರ್ಷ ಮೇಲ್ಪಟ್ಟ  ಎಲ್ಲ ಹಳೆಯ ವಾಹನಗಳ ದಂಡದ ಪ್ರಮಾಣದಲ್ಲಿ ಭಾರೀ ಏರಿಕೆ ಮಾಡಲಾಗಿದೆ. ನೋಂದಣಿ ಮತ್ತು ಕ್ಷಮತಾ ಪ್ರಮಾಣಪತ್ರಗಳ ನವೀಕರಣಕ್ಕೆ 10 ಸಾವಿರ ರೂ. ವಿಧಿಸಲಾಗುತ್ತಿದೆ.

ಒಂದು ವೇಳೆ ಎಫ್ಸಿ ಅವಧಿ ಮುಕ್ತಾಯಗೊಂಡಿದ್ದರೆ ಸಾರಿಗೇತರ ವಾಹನಗಳಿಗೆ ತಿಂಗಳಿಗೆ ಹೆಚ್ಚುವರಿಯಾಗಿ 500 ರೂ.ವಿಧಿಸಲಾಗುತ್ತಿದೆ. ಇದು ಅತ್ಯಂತ ದುಬಾರಿಯಾಗಿದ್ದು, ವಾಹನ ಸವಾರರಿಗೂ ತುಂಬಾ ಹೊರೆಯಾಗಿದೆ ಎಂದರು.

Leave a Reply

Your email address will not be published. Required fields are marked *

error: Content is protected !!