July 3, 2026

ಬಿಜೆಪಿ ಮುಖಂಡ ನೇಣು ಬಿಗಿದುಕೊಂಡು ಆತ್ಮಹತ್ಯೆ

0
image_editor_output_image-652677176-1652422776756.jpg

ಬೆಂಗಳೂರು: ಬಿಬಿಎಂಪಿ ಹೆರೋಹಳ್ಳಿ ವಾರ್ಡ್ ಬಿಜೆಪಿ ಮುಖಂಡ, ಬ್ಯಾಡರಹಳ್ಳಿ ನಿವಾಸಿ ಅನಂತರಾಜ್ (46) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ರಾತ್ರಿ ನಡೆದಿರುವುದು ವರದಿಯಾಗಿದೆ.

ಹಲವು ವರ್ಷಗಳಿಂದ ಥೈರಾಯಿಡ್ ಖಾಯಿಲೆಯಿಂದ ಬಳಲುತ್ತಿದ್ದ ಇವರು ಹಲವು ಬಾರಿ ಚಿಕಿತ್ಸೆ ಪಡೆದರೂ ಗುಣಮುಖರಾಗಿರಲಿಲ್ಲ. ಇದೇ ಕಾರಣಕ್ಕೆ ಮನನೊಂದು ಕಳೆದ ರಾತ್ರಿ 7.30ರ ವೇಳೆಗೆ ಮನೆಯಲ್ಲಿ ಫ್ಯಾನಿಗೆ‌‌ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ.

ಮನೆಯವರು ನೀಡಿದ ಮಾಹಿತಿ‌‌ ಮೇರೆಗೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!