ವಿಟ್ಲ: ಲಾರಿ ಮತ್ತು ಕಾರು ನಡುವೆ ಅಪಘಾತ: ಓರ್ವ ಗಾಯ
ವಿಟ್ಲ: ಲಾರಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಒಬ್ಬರು ಗಾಯಗೊಂಡ ಘಟನೆ ಕೇಪು ಕಲ್ಲಂಗಳ ಎಂಬಲ್ಲಿ ಸಂಭವಿಸಿದೆ.

ಪೆರ್ಲ ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದ ಕಾರು ಕಲ್ಲಂಗಳ ತಿರುವಿನಲ್ಲಿ ವಿಟ್ಲ ಕಡೆಯಿಂದ ಬರುತ್ತಿದ್ದ ಲಾರಿಯ ಹಿಂಬದಿಯ ಚಕ್ರಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಪ್ರಯಾಣಿಕ ಒಬ್ಬರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.




