ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಝಾಯೆದ್ ನಿಧನ
ಅಬುಧಾಬಿ: ಯುಎಇ ಅಧ್ಯಕ್ಷ ಮತ್ತು ಅಬುಧಾಬಿಯ ಆಡಳಿತಗಾರ ಹಿಸ್ ಹೈನೆಸ್ ಶೇಖ್ ಖಲೀಫಾ ಬಿನ್ ಝಾಯೆದ್ ಅಲ್ ನಹ್ಯಾನ್ ಅವರು ಶುಕ್ರವಾರ, ಮೇ 13 ರಂದು ನಿಧನರಾದರು ಎಂದು ಅಧ್ಯಕ್ಷೀಯ ವ್ಯವಹಾರಗಳ ಸಚಿವಾಲಯ ಪ್ರಕಟಿಸಿದೆ.
ಶೇಖ್ ಖಲೀಫಾ ಬಿನ್ ಝಾಯೆದ್ ಅಲ್ ನಹ್ಯಾನ್ ಅವರು ನವೆಂಬರ್ 3, 2004 ರಿಂದ ಯುಎಇ ಅಧ್ಯಕ್ಷರಾಗಿ ಮತ್ತು ಅಬುಧಾಬಿಯ ಆಡಳಿತಗಾರರಾಗಿ ಸೇವೆ ಸಲ್ಲಿಸಿದರು.
1948 ರಲ್ಲಿ ಜನಿಸಿದ ಶೇಖ್ ಖಲೀಫಾ ಯುಎಇ ಎರಡನೇ ರಾಷ್ಟ್ರಾಧ್ಯಕ್ಷ ಹಾಗೂ ಅಬುಧಾಬಿಯ ಎಮಿರೇಟ್ ನ 16ನೇ ಆಡಳಿತಗಾರ ಆಗಿದ್ದರು. ಅವರು ಶೇಖ್ ಝಾಯೆದ್ ರವರ ಹಿರಿಯ ಮಗ.





