September 26, 2026

15 ವರ್ಷದ ಬಾಲಕಿಯನ್ನು ಅಪಹರಿಸಿ, ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ

0
Screenshot_2022-05-13-18-33-59-62_680d03679600f7af0b4c700c6b270fe7.jpg

ರಾಂಚಿ: ಐವರು ಕಾಮುಕರು 15 ವರ್ಷದ ಬಾಲಕಿಯನ್ನು ಅಪಹರಿಸಿ, ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ರಾಂಚಿಯಲ್ಲಿ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಆರೋಪಿಗಳು ಬುಧವಾರ ರಾತ್ರಿ ಧುರ್ವಾದ ರಿಂಗ್ ರೋಡ್‌ನಲ್ಲಿ ಬಲವಂತವಾಗಿ ಕಾರಿಗೆ ತನ್ನನ್ನು ಹತ್ತಿಸಿಕೊಂಡರು ಎಂದು ಬಾಲಕಿ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

 

ಪೊಲೀಸರ ಗಸ್ತು ತಂಡವು ರತು ಪೊಲೀಸ್ ಠಾಣೆ ವ್ಯಾಪ್ತಿಯ ದಲಾದಲಿಯ ರೆಸ್ಟೋರೆಂಟ್ ಬಳಿ ಕಾರನ್ನು ಪತ್ತೆ ಮಾಡಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ(ರಾಂಚಿ-ಗ್ರಾಮೀಣ) ನೌಶಾದ್ ಆಲಂ ಅವರು ಪಿಟಿಐಗೆ ತಿಳಿಸಿದ್ದಾರೆ.

ಈ ಕಾರಿನಲ್ಲಿ ಏನೋ ನಡೆಯಬಾರದ ಕೃತ್ಯ ನಡೆಯುತ್ತಿದೆ ಎಂದು ಶಂಕೆ ವ್ಯಕ್ತಪಡಿಸಿದ ಪೊಲೀಸ್ ಸಿಬ್ಬಂದಿ, ಕಾರನ್ನು ಪರಿಶೀಲಿಸಲು ಹೋದಾಗ ಐವರು ಪುರುಷರೊಂದಿಗೆ ಅಳುತ್ತಿದ್ದ ಬಾಲಕಿಯನ್ನು ಕಂಡಿದ್ದಾರೆ ಎಂದು ನೌಶಾದ್ ಆಲಂ ಹೇಳಿದ್ದಾರೆ.

ಬಾಲಕಿ ಮೇಲೆ ಅತ್ಯಾಚಾರ ಎಸಗಿದ 20 ವರ್ಷದ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

ವೈದ್ಯಕೀಯ ಪರೀಕ್ಷೆ ಬಳಿಕ ಬಾಲಕಿಯನ್ನು ಮನೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!