September 20, 2024

ಸುರತ್ಕಲ್: ಪೊಲೀಸರ ಹೆಸರಿನಲ್ಲಿ‌ ಹಣ ಸುಲಿಗೆ, ಆರೋಪಿಯ ಬಂಧನ

0

ಮಂಗಳೂರು: ನಗರ ವ್ಯಾಪ್ತಿಯ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿನ ಆರೋಪಿಯ ಹೆಸರನ್ನು ಪೊಲೀಸರಲ್ಲಿ ಪ್ರಭಾವ ಬೀರಿ ಮಾತುಕತೆ ನಡೆಸಿ ಪ್ರಕರಣದಿಂದ ಹೆಸರನ್ನು ತೆಗೆಯುತ್ತೇನೆ ಎಂದು ಹೇಳಿ ರೂ 2.95 ಲಕ್ಷ ಹಣವನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಅಬ್ದುಲ್ ಖಾದರ್ ರಿಝ್ವಾನ್ (28) ಎಂದು ಗುರುತಿಸಲಾಗಿದೆ.

2021 ನೇ ದಶಂಬರ್ ತಿಂಗಳಲ್ಲಿ ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣವೊಂದು ದಾಖಲಾಗಿದ್ದು, ಈ ಪ್ರಕರಣದಲ್ಲಿನ ಆರೋಪಿಯು ದಸ್ತಗಿರಿಯಾಗದೇ ಇದ್ದು, ಈತನ ದಸ್ತಗಿರಿಗಾಗಿ ಹುಡುಕಾಡುತ್ತಿದ್ದರು.

ಈ ಸಮಯದಲ್ಲಿ ಆತನನ್ನು ಸಂಪರ್ಕಿಸಿದ ಇಬ್ಬರು ಪ್ರಕರಣದಲ್ಲಿ ಹೆಸರನ್ನು ತೆಗೆಯಲು ಪೊಲೀಸರಿಗೆ ಹಣ ನೀಡಿ ಅವರ ಜೊತೆ ಪ್ರಭಾವ ಬೀರಿ ಮಾತುಕತೆ ನಡೆಸಿ ಕೇಸಿನಿಂದ ಹೆಸರನ್ನು ತೆಗೆಯುತ್ತೇವೆ ಎಂದು ಹೇಳಿಕೊಂಡು ಆತನಿಂದ 3 ಲಕ್ಷ ಹಣವನ್ನು ಡಿಮ್ಯಾಂಡ್ ಮಾಡಿ ಹಂತ ಹಂತವಾಗಿ ಒಟ್ಟು 2,95,000 ಹಣವನ್ನು ಪಡೆದುಕೊಂಡಿದ್ದರು.

ಈ ಹಣವನ್ನು ಪಡೆದ ಬಳಿಕ ಹಣ ನೀಡಿದ ವ್ಯಕ್ತಿಯನ್ನು ಪೊಲೀಸರು ಹುಡುಕಾಡುತ್ತಿದ್ದ ವಿಚಾರವನ್ನು ತಿಳಿದ ಆತ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಪಡೆದಿದ್ದನು.

Leave a Reply

Your email address will not be published. Required fields are marked *

error: Content is protected !!