March 21, 2026

ಭೋಪಾಲ್‌: ಮೂವರು ಪೊಲೀಸರು ದುಷ್ಕರ್ಮಿಗಳ ಗುಂಡಿಗೆ ಬಲಿ

0
Screenshot_2022-05-14-11-50-18-06_680d03679600f7af0b4c700c6b270fe7.jpg

ಭೋಪಾಲ್‌: ಶನಿವಾರ ನಸುಕಿನಲ್ಲಿ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಮೂವರು ಪೊಲೀಸರು ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿದ್ದಾರೆ ಎಂದು ಎಂದು ಗೃಹ ಸಚಿವ ನರೋತ್ತಮ್ ಮಿಶ್ರಾ ತಿಳಿಸಿದ್ದಾರೆ.

ರಾಜ್ಯ ರಾಜಧಾನಿಯಿಂದ ಸುಮಾರು 160 ಕಿಮೀ ದೂರದಲ್ಲಿರುವ ಅರಾನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಮುಂಜಾನೆ 3 ಗಂಟೆಯ ಸುಮಾರಿನಲ್ಲಿ ಪೊಲೀಸ್ ಸಿಬ್ಬಂದಿ ದುಷ್ಕರ್ಮಿಗಳನ್ನು ಸೆರೆಹಿಡಿಯಲು ಹೋದಾಗ ಅವರ ಮೇಲೆ ದಾಳಿ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಮ್ಮ ನಿವಾಸದಲ್ಲಿ ಬೆಳಿಗ್ಗೆ 9.30ಕ್ಕೆ ಉನ್ನತ ಮಟ್ಟದ ತುರ್ತು ಸಭೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ (ಸಿಎಂಒ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಡಿಜಿಪಿ, ಗೃಹ ಸಚಿವರು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು, ಮುಖ್ಯ ಕಾರ್ಯದರ್ಶಿ ಮತ್ತಿತರರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಗೊತ್ತಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!