February 1, 2026

ಕ್ರಿಕೆಟ್ ದಿಗ್ಗಜ ಆಂಡ್ರ್ಯೂ ಸೈಮಂಡ್ಸ್ ಕಾರು ಅಪಘಾತದಲ್ಲಿ ಮೃತ್ಯು

0
57822337-0-image-a-23_1652574929016.jpg

ಆಸ್ಟ್ರೇಲಿಯ: ಕ್ರಿಕೆಟ್ ದಿಗ್ಗಜ ಆಂಡ್ರ್ಯೂ ಸೈಮಂಡ್ಸ್ ಅವರು ಕ್ವೀನ್ಸ್‌ ಲ್ಯಾಂಡ್‌ನಲ್ಲಿ ಕಾರ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಆಸ್ಟ್ರೇಲಿಯಾದ ಮಾಧ್ಯಮಗಳು ಭಾನುವಾರ ವರದಿ ಮಾಡಿವೆ.

ಸೈಮಂಡ್ಸ್ ಆಸ್ಟ್ರೇಲಿಯಾ ಪರ 26 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಎರಡು ಶತಕಗಳನ್ನು ದಾಖಲಿಸಿದ್ದಾರೆ. ಅವರು ಆಸ್ಟ್ರೇಲಿಯಾ ಪರ 198 ಏಕದಿನ ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿ, ಎರಡು ವಿಶ್ವಕಪ್ ಗೆದ್ದ ತಂಡದ ಭಾಗವಾಗಿದ್ದರು.

ರಾಯಿಟರ್ಸ್‌ ವರದಿಯ ಪ್ರಕಾರ, ಶನಿವಾರ ರಾತ್ರಿ ಟೌನ್ಸ್‌ ವಿಲ್ಲೆಯಿಂದ 50 ಕಿಮೀ ದೂರದಲ್ಲಿರುವ ಹರ್ವೆ ರೇಂಜ್‌ ನಲ್ಲಿ ಸೈಮಂಡ್ಸ್ ಸಾವನ್ನಪ್ಪಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ) ಟ್ವಿಟರ್‌ನಲ್ಲಿ ಅವರ ಸಾವನ್ನು ಖಚಿತಪಡಿಸಿದ್ದು, ಸಂತಾಪ ಸೂಚಿಸಿದೆ.

ಈ ಸುದ್ದಿ ನಿಜವಾಗಿಯೂ ಅತೀವ ಬೇಸರ ಹುಟ್ಟಿಸುತ್ತದೆ’ ಎಂದು ಆಸೀಸ್‌ ಹಿರಿಯ ಕ್ರಿಕೆಟಿಗ ಆಯಡಂ ಗಿಲ್‌ಕ್ರಿಸ್ಟ್‌ ತಿಳಿಸಿದ್ದಾರೆ. ಆಂಡ್ರ್ಯೂ ಸೈಮಂಡ್ಸ್ ನಿಧನಕ್ಕೆ ಭಾರತೀಯ ಕ್ರಿಕೆಟಿಗರೂ ಸೇರಿದಂತೆ ವಿಶ್ವಾದ್ಯಂತ ಕಂಬನಿ ವ್ಯಕ್ತವಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!