February 2, 2026

ಶರದ್ ಪವಾರ್ ವಿರುದ್ಧ ಫೇಸ್‌ಬುಕ್‌ ನಲ್ಲಿ ಅವಹೇಳನಕಾರಿ ಪೋಸ್ಟ್: ಮರಾಠಿ ನಟ ಕೇತಕಿ ಚಿತಾಲೆ ಬಂಧನ

0
7dnt562c_ketaki-chitale_625x300_14_May_22.jpg

ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದಕ್ಕೆ ಮರಾಠಿ ನಟಿ ಕೇತಕಿ ಚಿತಾಲೆಯನ್ನು ಮಹಾರಾಷ್ಟ್ರದಲ್ಲಿ ಶನಿವಾರ ಬಂಧಿಸಲಾಗಿದೆ.

ಕೇತಕಿ ಚಿತಾಲೆ ಅವರು ಶುಕ್ರವಾರ ತನ್ನ ಫೇಸ್‌ಬುಕ್ ಪೋಸ್ಟ್‌ನಲ್ಲಿ ಮರಾಠಿ ಕವಿತೆಯನ್ನು ಪೋಸ್ಟ್ ಮಾಡಿದ್ದು, ಅದು ಪವಾರ್ ಅವರ ನೋಟ, ಅನಾರೋಗ್ಯ ಮತ್ತು ಧ್ವನಿಯ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ. ಪೋಸ್ಟ್‌ನಲ್ಲಿ ‘ನರಕ ಕಾಯುತ್ತಿದೆ’ ಮತ್ತು ‘ನೀವು ಬ್ರಾಹ್ಮಣರನ್ನು ದ್ವೇಷಿಸುತ್ತೀರಿ’ ಎಂಬ ಪದಗಳು ಇದ್ದು, ಪವಾರ್ ಅವರನ್ನು ಉಲ್ಲೇಖಿಸಲಾಗಿದೆ ಎಂದು ಆರೋಪಿಸಲಾಗಿದೆ.

ಕೇತಕಿ ಚಿತಾಲೆಯನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದ್ದು, ಆಕೆಯ ವಿರುದ್ಧ ಐಪಿಸಿ ಸೆಕ್ಷನ್ 153ಎ, 500, 501 ಮತ್ತು 505 ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!