February 2, 2026

ಅಸ್ಸಾಂನಲ್ಲಿ ಭೀಕರ ಪ್ರವಾಹ: ಮೂವರು ಮೃತ್ಯು, ಅನೇಕ ಮಂದಿ ಸಂಕಷ್ಟ

0
assamfloods_d.jpg

ಗುವಾಹಟಿ: ಈ ವರ್ಷ ಮುಂಗಾರು ಆರಂಭಕ್ಕೂ ಮುನ್ನ ಸಂಭವಿಸಿದ ಮೊದಲ ಪ್ರವಾಹದಲ್ಲಿ ಅಸ್ಸಾಂನ ಆರು ಜಿಲ್ಲೆಗಳಲ್ಲಿ ಸುಮಾರು 25,000 ಜನರು ಸಂತ್ರಸ್ತರಾಗಿದ್ದಾರೆ. ದಿಮಾ ಹಸಾವೊ ಜಿಲ್ಲೆಯ ಹಫ್ಲಾಂಗ್ ಪ್ರದೇಶದಲ್ಲಿ ಶನಿವಾರ ಸಂಭವಿಸಿದ ಭೂಕುಸಿತ ಘಟನೆಗಳಲ್ಲಿ ಮಹಿಳೆ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ

ಅಸ್ಸಾಂ ಮತ್ತು ನೆರೆಯ ರಾಜ್ಯಗಳಾದ ಮೇಘಾಲಯ ಮತ್ತು ಅರುಣಾಚಲ ಪ್ರದೇಶದಲ್ಲಿ ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಹಲವು ನದಿಗಳ ನೀರಿನ ಮಟ್ಟ ಕ್ರಮೇಣ ಹೆಚ್ಚುತ್ತಿದೆ.

ಇನ್ನು ಮೇ 14 ರವರೆಗೆ ಆರು ಜಿಲ್ಲೆಗಳ 94 ಹಳ್ಳಿಗಳಲ್ಲಿ ಒಟ್ಟು 24,681 ಜನರು ಹಾನಿಗೊಳಗಾಗಿದ್ದು, ಪ್ರವಾಹದಿಂದಾಗಿ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ 1732.72 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ಮುಳುಗಡೆಯಾಗಿದೆ. ಸೇನೆ, ಅರೆ ಮಿಲಿಟರಿ ಪಡೆಗಳು, ಎಸ್‌ಡಿಆರ್‌ಎಫ್, ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಶನಿವಾರ ಕ್ಯಾಚಾರ್ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಂದ 2,150 ಜನರನ್ನು ರಕ್ಷಿಸಿವೆ. ಹೋಜೈ, ಲಖಿಂಪುರ, ನಾಗಾಂವ್ ಜಿಲ್ಲೆಗಳಲ್ಲಿ ಹಲವಾರು ರಸ್ತೆಗಳು, ಸೇತುವೆಗಳು ಮತ್ತು ನೀರಾವರಿ ಕಾಲುವೆಗಳು ಹಾನಿಗೊಳಗಾಗಿವೆ.

Leave a Reply

Your email address will not be published. Required fields are marked *

error: Content is protected !!