ಮಾಜಿ ಸಚಿವ ಜಿ ಟಿ ದೇವೆಗೌಡ ರ ಮೊಮ್ಮಗಳು ನಿಧನ
ಮೈಸೂರು: ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ, ಮಾಜಿ ಸಚಿವ ಜಿ ಟಿ ದೇವೆಗೌಡ ರ ಮೊಮ್ಮಗಳು ಮೃತಪಟ್ಟಿದ್ದು, ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ.
ಜಿ. ಟಿ. ದೇವೇಗೌಡರ ಪುತ್ರ ಜಿ. ಡಿ. ಹರೀಶ್ ಗೌಡ ಪುತ್ರಿ ಗೌರಿ (3) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ರಾತ್ರಿ ಮೃತಪಟ್ಟಿದ್ದಾಳೆ. ಧೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮಗು ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿತ್ತು.
ಗೌರಿ ನಿಧನಕ್ಕೆ ಎಚ್. ಡಿ. ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಭಾನುವಾರ ಟ್ವೀಟ್ ಮಾಡಿರುವ ಅವರು, ‘ಮಾಜಿ ಮಂತ್ರಿಗಳಾದ ಶ್ರೀ ಜಿ.ಟಿ.ದೇವೇಗೌಡರ ಮೊಮ್ಮಗಳು, ಮೂರು ವರ್ಷದ ಹಸುಗೂಸು ಗೌರಿ ಅನಾರೋಗ್ಯದಿಂದ ಅಸುನೀಗಿರುವ ಸುದ್ದಿ ಕೇಳಿ ದಿಗ್ಭ್ರಮೆಯಾಯಿತು. ಮುದ್ದು ಕಂದಳ ಅಗಲಿಕೆ ನನಗೆ ಬಹಳ ದುಃಖ ಉಂಟು ಮಾಡಿದೆ’ ಎಂದು ಹೇಳಿದ್ದಾರೆ.




