February 2, 2026

ಶರದ್ ಪವಾರ್ ವಿರುದ್ಧ ಮಾತನಾಡಿದ್ದಕ್ಕೆ ಬಿಜೆಪಿ ನಾಯಕನಿಗೆ ಕಪಾಳ ಮೋಕ್ಷ

0
mtdfab6o_bjp-leader-slapped-ndtv_625x300_15_May_22.jpg

ಮುಂಬೈ: ನ್ಯಾಷನಲಿಷ್ಟ್ ಕಾಂಗ್ರೆಸ್ ಪಾರ್ಟಿ (ಎನ್ಸಿಪಿ) ಮುಖ್ಯಸ್ಥ ಹಾಗೂ ಹಿರಿಯ ರಾಜಕಾರಣಿ ಶರದ್ ಪವಾರ್ ವಿರುದ್ಧ ಮಾತನಾಡಿದ್ದಕ್ಕೆ ಮಹಾರಾಷ್ಟ್ರದ ಬಿಜೆಪಿ ವಕ್ತಾರ ವಿನಾಯಕರ್ ಅಂಬೇಕರ್ಗೆ ಎನ್ಸಿಪಿ ಕಾರ್ಯಕರ್ತರು ಕಪಾಳ ಮೋಕ್ಷ ಮಾಡಿದ್ದಾರೆ.

ಬಿಜೆಪಿ ನಾಯಕನ ಮೇಲೆ ಎನ್​ಸಿಪಿ ಕಾರ್ಯಕರ್ತರು ಕೈ ಮಾಡಿದ ವಿಡಿಯೋವನ್ನು ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್​ ಪಾಟೀಲ್​ ತಮ್ಮ ಟ್ವಿಟರ್​ನಲ್ಲಿ ಪೋಸ್ಟ್​ ಮಾಡಿ ಖಂಡಿಸಿದ್ದಾರೆ.

ಮಹಾರಾಷ್ಟ್ರ ಪ್ರದೇಶ ಭಾರತೀಯ ಜನತಾ ಪಕ್ಷದ ವಕ್ತಾರ ವಿನಾಯಕ್​ ಅಂಬೇಕರ್​ ಮೇಲೆ ಎನ್​ಸಿಪಿ ಗೂಂಡಾಗಳು ದಾಳಿ ಮಾಡಿದ್ದಾರೆ. ಬಿಜೆಪಿ ಪರವಾಗಿ ನಾನು ಈ ಘಟನೆಯನ್ನು ಬಲವಾಗಿ ಖಂಡಿಸುತ್ತೇನೆ. ಈ ಗೂಂಡಾಗಳನ್ನು ತಕ್ಷಣ ಬಂಧಿಸಬೇಕು ಎಂದು ಟ್ವೀಟ್​ ಮೂಲಕ ಚಂದ್ರಕಾಂತ್​ ಪಾಟೀಲ್ ಆಗ್ರಹಿಸಿದ್ದಾರೆ.

ಎನ್​ಸಿಪಿಯ ಕೆಲ ಕಾರ್ಯಕರ್ತರು ಮೇಜಿನ ಬಳಿ ಕುಳಿತಿರುವ ಅಂಬೇಕರ್ ಅವರೊಂದಿಗೆ ವಾಗ್ವಾದ ನಡೆಸುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಇದರ ಮಧ್ಯೆ ವ್ಯಕ್ತಿಯೊಬ್ಬ ಅವರಿಗೆ ಕಪಾಳಮೋಕ್ಷ ಮಾಡಿದ್ದಾನೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದ್ದು, ಪರ-ವಿರೋಧ ಚರ್ಚೆ ಆರಂಭವಾಗಿದೆ.

Leave a Reply

Your email address will not be published. Required fields are marked *

error: Content is protected !!