March 23, 2026

ಕನ್ನಡ ಕಿರುತೆರೆ ನಟಿ ಚೇತನಾ ರಾಜ್ ನಿಧನ: ವೈದ್ಯರ ನಿರ್ಲಕ್ಷ್ಯವೇ ಕಾರಣ, ಕುಟುಂಬದ ಆರೋಪ

0
n38701762816527549553630def412c8cfcb5d834087eeec7883ccae310f80a4655b29b86a7e744b8a37d70.jpg

ಬೆಂಗಳೂರು: ಕನ್ನಡ ಕಿರುತೆರೆ ನಟಿ ಚೇತನಾ ರಾಜ್(21) ಕಾಸ್ಮೆಟಿಕ್ ಸರ್ಜರಿಗೆ ಒಳಗಾಗಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಘಟನೆಯು ಬೆಂಗಳೂರಿನ ಸುಬ್ರಹ್ಮಣ್ಯ ನಗರ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ರಾಜಾಜಿನಗರ ಬಳಿ ಇರುವ ಶೆಟ್ಟಿ ಆಸ್ಪತ್ರೆಯಲ್ಲಿ ಫ್ಯಾಟ್ ರಿಡಕ್ಷನ್ ಸರ್ಜರಿ ಎಂದು ಕರೆಯಲಾಗುವ ಕಾಸ್ಮೆಟಿಕ್ ಶಸ್ತ್ರಚಿಕಿತ್ಸೆಗೆ ಚೇತನಾ ರಾಜ್ ಒಳಗಾಗಿದ್ದರು.

ಚಿಕಿತ್ಸೆ ಸಂದರ್ಭದಲ್ಲಿ ಚೇತನಾ ಅವರ ದೇಹದ ಕೊಬ್ಬು ತೆಗೆಯುವ ವೇಳೆ ಶ್ವಾಸಕೋಶಕ್ಕೆ ನೀರು ಸೇರಿಕೊಂಡಿದ್ದು, ಆಕೆಯನ್ನು ಉಳಿಸಲು ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ.

ಚೇತನಾ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಪೋಷಕರು ದೂರಿದ್ದಾರೆ. ಆಸ್ಪತ್ರೆ ಬಳಿ ಚೇತನಾರ ಪೋಷಕರು ನ್ಯಾಯಕ್ಕಾಗಿ ಆಗ್ರಹಿಸಿಸುತ್ತಿದ್ದು, ವೈದ್ಯರು ಹಾಗೂ ಆಸ್ಪತ್ರೆ ವಿರುದ್ಧ ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!