March 23, 2026

ಪಿಎಸ್‌ಐ ನೇಮಕಾತಿ ಅಕ್ರಮ: ಇನ್ಸ್‌ಪೆಕ್ಟರ್‌ ಬಸವರಾಜು ಸೇರಿ ಇಬ್ಬರ ಬಂಧನ

0
image_editor_output_image-401159140-1652766581920.jpg

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಸಂಬಂಧ ನೇಮಕಾತಿ ವಿಭಾಗದ ಮತ್ತೋರ್ವ ಇನ್ಸ್‌ಪೆಕ್ಟರ್‌ ಸೇರಿ ಇಬ್ಬರನ್ನು ಸಿಐಡಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಬೆಂಗಳೂರು ಸಿಎಆರ್‌ ವಿಭಾಗದಲ್ಲಿ ಇನ್‌ಸ್ಪೆಕ್ಟರ್‌ ಆಗಿದ್ದ ಜಿ.ಬಸವರಾಜು ಮತ್ತು ಪಿಎಸ್‌ಐ ಪರೀಕ್ಷೆಯ ಅಭ್ಯರ್ಥಿ ಸಿ.ಎಂ.ನಾರಾಯಣನನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಕೋರ್ಟ್‌ಗೆ ಹಾಜರು ಪಡಿಸಿ ಇಬ್ಬರನ್ನು ಪೊಲೀಸ್‌ ಕಸ್ಟಡಿಗೆ ಪಡೆಯಲಾಗಿದೆ.

ಇನ್‌ಸ್ಪೆಕ್ಟರ್‌ ಜಿ.ಬಸವರಾಜು ಈಗಾಗಲೇ ಬಂಧನಕ್ಕೊಳಗಾದ ಡಿವೈಎಸ್ಪಿ ಶಾಂತಕುಮಾರ್‌ ಸೂಚನೆ ಮೇರೆಗೆ ಕೆಲ ಅಭ್ಯರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತೀರ್ಣಗೊಳಿಸುವುದಾಗಿ ಭರವಸೆ ನೀಡಿ ಹಣ ಪಡೆದುಕೊಂಡಿದ್ದರು ಎಂದು ಸಿಐಡಿ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!