ಜ್ಞಾನವ್ಯಾಪಿ ಮಸೀದಿಯ ಕೊಳದಲ್ಲಿ ಶಿವಲಿಂಗ ಪತ್ತೆಯಾಗಿಲ್ಲ ಅಲ್ಲಿರುವುದು ಫೌಂಟನ್: ಮಸೀದಿ ಆಡಳಿತ ಮಂಡಳಿ
ವಾರಾಣಸಿ: ಮೂರು ದಿನಗಳ ಜ್ಞಾನವಾಪಿ ಮಸೀದಿ ಸಮೀಕ್ಷೆ ಸೋಮವಾರ ಮುಕ್ತಾಯಗೊಂಡ ನಂತರ, ಹಿಂದೂ ಪರ ವಕೀಲರು ಮಸೀದಿ ಸಂಕೀರ್ಣದ ವಝುಖಾನಾ ಅಥವಾ ಜಲಾಶಯದಲ್ಲಿ ಶಿವಲಿಂಗ ಕಂಡುಬಂದಿದೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಈ ಕೊಳಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಮಸೀದಿ ಒಳಗಡೆ ಶಿವಲಿಂಗ ಪತ್ತೆಯಾಗಿದೆ ಎಂಬ ವಕೀಲರ ಹೇಳಿಕೆ ದೇಶಾದ್ಯತ ಸಂಚಲನಕ್ಕೆ ಕಾರಣವಾಗಿದೆ. ಇನ್ನೊಂದೆಡೆ ಮಸೀದಿಯ ಆಡಳಿತ ಮಂಡಳಿ, ಹಿಂದೂ ಅರ್ಜಿದಾರರ ಪರ ವಕೀಲರ ವಾದವನ್ನು ತಳ್ಳಿಹಾಕಿದ್ದಾರೆ.
ಕೊಳದಲ್ಲಿ ಶಿವಲಿಂಗ ಪತ್ತೆಯಾಗಿಲ್ಲ. ಅಲ್ಲಿರುವುದು ಫೌಂಟನ್. ಇದನ್ನೇ ಅವರು ಶಿವಲಿಂಗ ಎಂದು ಅಂದುಕೊಂಡಿದ್ದಾರೆ ಎಂದಿದ್ದಾರೆ. ಹಾಗೆಯೇ, ಕೊಳಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿದ್ದನ್ನು ವಿರೋಧಿಸಿದ್ದಾರೆ.




