March 22, 2026

ಗುಂಡ್ಲುಪೇಟೆ: ಕಾರು, ಬೈಕ್ ನಡುವೆ ಮುಖಾಮುಖಿ ಢಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಮೃತ್ಯು, ಮತ್ತೋರ್ವ ಗಂಭೀರ

0
image_editor_output_image2085840367-1652779874157.jpg

ಗುಂಡ್ಲುಪೇಟೆ (ಚಾಮರಾಜನಗರ): ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ತಾಲೂಕಿನ ರಾಘವಾಪುರ ಗೇಟ್ ಬಳಿ ಮಂಗಳವಾರ ನಡೆದಿದೆ.

ತಾಲೂಕಿನ ಬೆಂಡರವಾಡಿ ಗ್ರಾಮದ ಮನು (23) ಮೃತ ಯುವಕ. ಗುಂಡ್ಲುಪೇಟೆ ಪಟ್ಟಣದ ತೋಟದ ಬೀದಿಯ ನಿವಾಸಿ ನಾಗರಾಜು (33) ಎಂಬಾತನಿಗೆ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ.

ಕೇರಳದ ಮಲಪುರಂನ ಮಾಧವನ್ ಎಂಬಾತನ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಓವರ್ ಟೇಕ್ ಮಾಡುವ ಭರದಲ್ಲಿ ಈ ಅವಘಡ ಉಂಟಾಗಿದೆ ಎನ್ನಲಾಗಿದೆ.

ಸದ್ಯ ಎರಡು ವಾಹನಗಳನ್ನು ವಶಕ್ಕೆ ಪಡೆದು ಬೇಗೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!